ಉತ್ತರ ಪ್ರದೇಶ:ಪ್ರಿಯಾಂಕಾ ಗಾಂಧಿ ಜೊತೆ ಸೆಲ್ಫಿ ಕ್ಲಿಕ್ಕಿಸಿದ್ದ ಮಹಿಳಾ ಪೇದೆಗಳ ವಿರುದ್ಧ ತನಿಖೆಗೆ ಆದೇಶ

ಆಗ್ರಾ: ಕಾಂಗ್ರೆಸ್​ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಬುಧವಾರ ಆಗ್ರಾಕ್ಕೆ ತೆರಳಿದ್ದ ಸಂದರ್ಭದಲ್ಲಿ ಪ್ರಿಯಾಂಕ ಗಾಂಧಿ ಆಗ್ರಾಕ್ಕೆ ಬರುವುದನ್ನು ಉತ್ತರಪ್ರದೇಶ ಸರ್ಕಾರ ತಡೆದಿತ್ತು.
ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬ ಭೇಟಿಯಾಗಲು ಪ್ರಿಯಾಂಕಾ ಗಾಂಧಿ ಆಗ್ರಾಕ್ಕೆ ತೆರಳುತ್ತಿದ್ದಾಗ ಪೊಲೀಸರು ಪ್ರಿಯಾಂಕ ಅವರನ್ನು ತಡೆದು ವಾಪಸ್ ಕಳುಹಿಸಿದ್ದರು. ಈ ವೇಳೆ ಕೆಲವು ಮಹಿಳಾ ಪೊಲೀಸರು ಪ್ರಿಯಾಂಕ ಗಾಂಧಿ ಜೊತೆಗೆ ಸೆಲ್ಫಿ ತೆಗೆದುಕೊಂಡಿದ್ದರು. ಈ ಸೆಲ್ಫಿ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಈಗ ಮಹಿಳಾ ಪೊಲೀಸರ ವಿರುದ್ಧ ತನಿಖೆಗೆ ಲಕ್ನೋ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ ಎಂದು ವರದಿಯಾಗಿದೆ.
ಮಹಿಳಾ ಪೊಲೀಸರು ಪ್ರಿಯಾಂಕ ಗಾಂಧಿ ಅವರೊಂದಿಗೆ ಸೆಲ್ಪಿ ತೆಗೆದುಕೊಳ್ಳುತ್ತಿರುವ ಚಿತ್ರ ವೈರಲ್ ಆಗುತ್ತಿದ್ದಂತೆ, ಮಹಿಳಾ ಪೊಲೀಸರ ವರ್ತನೆ ಪೊಲೀಸ್ ನಿಯಮಾವಳ ಉಲ್ಲಂಘನೆಯಾಗಿದೆಯೆ ಎಂದು ಹೇಳಿ ಈ ಬಗ್ಗೆ ಪ್ರಾಥಮಿಕ ವಿಚಾರಣೆಗೆ ಕೇಂದ್ರೀಯ ವಿಭಾಗದ ಉಪ ಪೊಲೀಸ್‌ ಆಯುಕ್ತರಿಗೆ ಸೂಚಿಸಲಾಗಿದ್ದು, ಈ ವರದಿಯ ಆಧಾರಲ್ಲಿ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕೋ ಬೇಡವೋ ಎಂಬುದರ ಬಗ್ಗೆ ಆಯುಕ್ತರು ನಿರ್ಧರಿಸಲಿದ್ದಾರೆ.
ಈ ಫೋಟೊ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತುಂಬಾ ಅಸಮಾಧಾನ ಗೊಂಡಿದ್ದಾರೆ ಎಂದು ಸುದ್ದಿ ಬರುತ್ತಿದೆ. ಈ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಅವರು ಬಯಸುತ್ತಿದ್ದಾರೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದು, ನನ್ನೊಂದಿಗೆ ಚಿತ್ರ ತೆಗೆಯುವುದು ಅಪರಾಧವಾಗಿದ್ದರೆ, ಅದಕ್ಕಾಗಿ ನನಗೂ ಶಿಕ್ಷೆಯಾಗಬೇಕು” ಎಂದು ಟ್ವೀಟ್‌ ಮಾಡಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ, ಸರ್ಕಾರ ಈ ಶ್ರಮಜೀವಿ ಮತ್ತು ನಿಷ್ಠಾವಂತ ಪೊಲೀಸರ ವೃತ್ತಿಜೀವನವನ್ನು ಹಾಳು ಮಾಡುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement