ಕರ್ನಾಟಕದಲ್ಲಿ ಇನ್ನೂ ನಾಲ್ಕೈದು ದಿನ ಭಾರಿ ಮಳೆ, ಕರಾವಳಿ ಜಿಲ್ಲೆಗಳು, ಬೆಂಗಳೂರಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರ್ನಾಟಕದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ.
ರಾಜ್ಯದ ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಯೆಲ್ಲಾ ಅಲರ್ಟ್‌ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಅಧಿಕ ಮಳೆ
ಕರಾವಳಿ ಭಾಗದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿ ಜನರು ಎಚ್ಚರವಾಗಿರುವಂತೆ ಸೂಚನೆಯನ್ನು ನೀಡಲಾಗಿದೆ.
ಬೆಂಗಳೂರಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಈಗಾಗಲೇ ಮಳೆಯಿಂದಾಗಿ ಬೆಂಗಳೂರಿನ ಹಲವು ಕಡೆಗಳಲ್ಲಿ ಹಾನಿಯಾಗಿದೆ. ಬೆಂಗಳೂರಲ್ಲಿ ಮತ್ತೆ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ.

ಪ್ರಮುಖ ಸುದ್ದಿ :-   ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಕ್ಕೆ ಹೆದರಲ್ಲ: ಕೆ.ಎಸ್.ಈಶ್ವರಪ್ಪ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement