ಡ್ರಗ್ಸ್‌ ಪ್ರಕರಣ: ಜೈಲಿನಲ್ಲಿರುವ ಮಗನನ್ನು ಮೊದಲ ಬಾರಿಗೆ ಭೇಟಿಯಾದ ನಟ ಶಾರೂಖ್ ಖಾನ್‌

ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ಅಧಿಕಾರಿಗಳಿಂದ ಅಕ್ಟೋಬರ್ 8 ರಿಂದ ಬಂಧನಕ್ಕೆ ಒಳಗಾಗಿ ಮುಂಬೈ ಅರ್ಥರ ಜೈಲಿನಲ್ಲಿರುವ ಪುತ್ರ ಆರ್ಯನ್ ಖಾನ್‍ ಅವರನ್ನು ಬಾಲಿವುಡ್ ನಟ ಶಾರೂಖ್ ಖಾನ್ ಇಂದು (ಗುರುವಾರ) ಜೈಲಿನಲ್ಲಿ ಭೇಟಿಯಾಗಿದ್ದಾರೆ.
ಅಕ್ಟೋಬರ್ 2 ರಂದು ಮುಂಬೈನಿಂದ ಗೋವಾಗೆ ಹೊರಟಿದ್ದ ಐಷಾರಾಮಿ ಹಡಗಿನಲ್ಲಿ ರೇವ್ ಪಾರ್ಟಿ ನಡೆಸಲಾಗಿತ್ತಿತ್ತು. ಈ ಪಾರ್ಟಿಯಲ್ಲಿ ಸ್ನೇಹಿತರ ಜೊತೆಗೆ ಭಾಗಿಯಾಗಿದ್ದ ಆರ್ಯನ್ ಖಾನ್ ಡ್ರಗ್ ಸೇವನೆ ಮಾಡಿದ್ದರು ಎಂದು ಆರೋಪಿಸಿ ಎನ್‍ಸಿಬಿ ಅಧಿಕಾರಿಗಳು ಬಂಧಿಸಿದ್ದರು, ಮಗ ಜೈಲು ಸೇರಿದ ನಂತರ ಮೊದಲ ಬಾರಿಗೆ ಶಾರೂಖ್ ಖಾನ್ ತಮ್ಮ ಮಗನನ್ನು ಭೇಟಿಯಾಗಿದ್ದಾರೆ.
ಕೋವಿಡ್-19 ಮಧ್ಯೆ ಮಹಾರಾಷ್ಟ್ರ ಸರ್ಕಾರ ಜೈಲಿನಲ್ಲಿರುವವರನ್ನು ಭೇಟಿಯಾಗಲು ನಿರ್ಬಂಧ ಹೇರಿತ್ತು. ಈಗ ಈ ನಿರ್ಬಂಧಗಳನ್ನು ಸಡಿಲಗೊಳಿಸಿದ ಬಳಿಕ ಶಾರೂಖ್ ಮಗನನ್ನು ಭೇಟಿಯಾಗಿ ಸುಮಾರು 20 ನಿಮಿಷ ಮಗನೊಂದಿಗೆ ಕಳೆದರು.
ಎರಡು ಸಲ ಆರ್ಯನ್ ಖಾನ್‍ಗೆ ಕೋರ್ಟ್‌ ಜಾಮೀನನ್ನು ನಿರಾಕರಿಸಿದ್ದು, ಇದೀಗ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಲಾಗಿದೆ. ಅಲ್ಲದೇ ಇಂದಿಗೆ ಆರ್ಯನ್ ಖಾನ್ ನ್ಯಾಯಾಂಗ ಬಂಧನ ಅಂತ್ಯಗೊಳ್ಳಲಿದೆ.

ಪ್ರಮುಖ ಸುದ್ದಿ :-   'ಇದು ಸಾಮಾನ್ಯ ಚುನಾವಣೆಯಲ್ಲ' : ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನಕ್ಕೂ ಮುನ್ನ ಬಿಜೆಪಿ-ಎನ್‌ಡಿಎ ಅಭ್ಯರ್ಥಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement