ಪೋಲಿಸ್ ಕಾನ್ಸ್‌ಟೇಬಲ್ ಪರೀಕ್ಷೆ: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಅಕ್ಟೋಬರ್‌ 23, 24ರಂದು ವಿಶೇಷ ಬಸ್‌ಗಳ ವ್ಯವಸ್ಥೆ

ಹುಬ್ಬಳ್ಳಿ: ರಾಜ್ಯಾದ್ಯಂತ ಅಕ್ಟೋಬರ್‌ 24ರಂದು ಭಾನುವಾರ ನಡೆಯುವ ಪೋಲಿಸ್ ಕಾನ್ಸ್‌ಟೇಬಲ್(ಸಿವಿಲ್) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಹಾಗೂ ಮರಳಿ ಸ್ವ-ಸ್ಥಳಗಳಿಗೆ ಹಿಂದಿರುಗಲು ಅಕ್ಟೋಬರ್‌ 23 ಮತ್ತು 24ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್‌ಗಳನ್ನು ಓಡಿಸುತ್ತಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟ ವಿಭಾಗಗಳ ಪ್ರಮುಖ ಬಸ್ ನಿಲ್ದಾಣಗಳಿಂದ, ಪರೀಕ್ಷೆಗಳು ನಡೆಯುವ ಕೇಂದ್ರಗಳಾದ ಕಾರವಾರ, ಉಡುಪಿ, ಮಂಗಳೂರು, ಮೂಡಬಿದ್ರೆ, ಕಾರವಾರ ಹಾಗೂ ಇನ್ನಿತರ ಜಿಲ್ಲಾ ಕೇಂದ್ರಗಳಿಗೆ ಅವಶ್ಯಕತೆ ಹಾಗೂ ಬೇಡಿಕೆಗಳಿಗನುಗುಣವಾಗಿ ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮುಂಗಡ ಟಿಕೇಟ್‌ಗಳನ್ನು ksrtc mobile app ಅಥವಾ ksrtc.karnataka.gov.in ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ ಎಂದು ತಿಳಿಸಲಾಗಿದೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಈ ವಿಶೇಷ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

4 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement