ಶಿರಸಿ: ಕಾಡಿನಲ್ಲಿ ದನ ಕಡಿಯುವಾಗಲೇ ಪೊಲೀಸರ ದಾಳಿ; ಓರ್ವನ ಬಂಧನ, ಮೂವರು ಪರಾರಿ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡಳ್ಳಿ ಗ್ರಾಮದ ಉರ್ದು ಶಾಲೆಯ ಹಿಂಭಾಗದ ಕಾಡಿನ ಜಾಗದಲ್ಲಿ ಅಕ್ರಮವಾಗಿ ಮಾಂಸಕ್ಕಾಗಿ ದನವನ್ನು ಕಡಿಯುತ್ತಿರುವ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಗೋವನ್ನು ಕಡಿಯುವಾಗಲೇ ಒಬ್ಬನನ್ನು ಬಂಧಿಸಿದ್ದು, ಉಳಿದ ಮೂವರು ಪರಾರಿಯಾಗಿದ್ದಾರೆ.
ಕಾಡಿನಲ್ಲಿ ಹಸುವನ್ನು ಮಾಂಸಕ್ಕಾಗಿ ಕಡಿಯಲಾಗುತ್ತಿದೆ ಎಂಬ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ, ಆಗ ಆರೋಪಿ ನಜೀರ್ ಅಹಮದ್ ಎಂಬವನನ್ನು ಬಂಧಿಸಲಾಗಿದ್ದು, ಮಾಂಸಕ್ಕಾಗಿ ಕಡಿಯಲು ಉಪಯೋಗಿಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ವೇಳೆ ಓಡಿ ಹೋದ ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ.

5 / 5. 1

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

ನಿಮ್ಮ ಕಾಮೆಂಟ್ ಬರೆಯಿರಿ

advertisement