ಅಮೆರಿಕದ ಟಕೋಮಾದಲ್ಲಿ ಗುಂಡಿನ ದಾಳಿ; ನಾಲ್ವರ ಹತ್ಯೆ

ವಾಷಿಂಗ್ಟನ್: ಅಮೆರಿಕದ ಟಕೋಮಾದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗುರುವಾರ ಈ ಘಟನೆ ನಡೆದಿದ್ದು, ಗುಂಡಿನ ದಾಳಿಯಲ್ಲಿ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಗಾಯಗೊಂಡಿದ್ದ ಇನ್ನೊಬ್ಬನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತ ಗುರುವಾರ ಸಂಜೆಯ ವೇಳೆಗೆ ಮೃತಪಟ್ಟಿದ್ದಾನೆ ಎಂದು ಟಕೋಮಾ ಪೊಲೀಸರು ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದಾರೆ.
ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ಈ ಗುಂಡಿನ ದಾಳಿ ನಡೆದಿದೆ ಎಂದು ತಿಳಿಸಲಾಗಿದ್ದು, ಗುಂಡಿನ ದಾಳಿಯಲ್ಲಿ ಮೃತಪಟ್ಟವರು 35 ವರ್ಷದೊಳಗಿನವರು ಎಂದು ಹೇಳಿರುವ ಪೊಲೀಸರು ಟಕೋಮಾ ನಗರದ ಈಸ್ಟ್ ಸೈಡ್ ಸಮೀಪದ ಎವೆರೆಟ್ ಸ್ಟ್ರೀಟ್ ನ 4200 ಬ್ಲಾಕ್ ನಲ್ಲಿ ಈ ಗುಂಡಿನ ದಾಳಿ ನಡೆದಿದೆ ಎಂದು ತಿಳಿಸಿದ್ದಾರೆ.
ಇದಕ್ಕೆ ಕಾರಣವೇನೆಂಬುದು ಪತ್ತೆಯಾಗಿಲ್ಲ. ಈ ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಮೆರಿಕದ ಯೂನಿವರ್ಸಿಟಿಯೊಂದರಲ್ಲಿ ಕೆಲವು ದಿನಗಳ ಹಿಂದೆ ಗುಂಡಿನ ದಾಳಿಯಾಗಿದ್ದು, ಈ ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದ. ಏಳು ಮಂದಿ ಗಾಯಗೊಂಡಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ