ಕರ್ನಾಟಕದಲ್ಲಿ ಶುಕ್ರವಾರ ಹೊಸದಾಗಿ 378 ಜನರಿಗೆ ಕೊರೊನಾ ಸೋಂಕು; 11 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು (ಶುಕ್ರವಾರ) ಹೊಸದಾಗಿ 378 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 11 ಜನರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,85,227 ಕ್ಕೆ ಏರಿಕೆಯಾಗಿದೆ. ಒಟ್ಟು 29,38,312 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 37,995 ಜನ ಮೃತಪಟ್ಟಿದ್ದಾರೆ. 8,891 ಸಕ್ರಿಯ ಪ್ರಕರಣಗಳಿವೆ.ಸೋಂಕಿನ ಪ್ರಮಾಣ ಶೇ. 0.36 ರಷ್ಟಿದ್ದು, ಮರಣ ಪ್ರಮಾಣ ಶೇ. 2.91 ರಷ್ಟಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 195 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದಾರೆ. 239 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,50,320 ಕ್ಕೆ ಏರಿಕೆಯಾಗಿದೆ. ಒಟ್ಟು 12,27,388 ಜನರು ಗುಣಮುಖರಾಗಿದ್ದಾರೆ. ಈವರೆಗೆ 16,236 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,695 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ವಿವರ
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 195, ಬೀದರ್ 0, ಚಾಮರಾಜನಗರ 4, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 3, ಚಿತ್ರದುರ್ಗ 4, ದಕ್ಷಿಣ ಕನ್ನಡ 24, ದಾವಣಗೆರೆ 1, ಧಾರವಾಡ 5, ಗದಗ 0, ಹಾಸನ 21, ಹಾವೇರಿ 0, ಕಲಬುರಗಿ 0, ಕೊಡಗು 12, ಕೋಲಾರ 6, ಕೊಪ್ಪಳ 0, ಮಂಡ್ಯ 1, ಮೈಸೂರು 23, ರಾಯಚೂರು 1, ರಾಮನಗರ 0, ಶಿವಮೊಗ್ಗ 15, ತುಮಕೂರು 23, ಉಡುಪಿ 14, ಉತ್ತರ ಕನ್ನಡ 8, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ 7 ಮಂದಿ ಮೃತಪಟ್ಟಿದ್ದಾರೆ. ದಾವಣಗೆರೆ, ಧಾರವಾಡ, ಕೋಲಾರ ಮತ್ತು ತುಮಕೂರು ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement