ತಿರುಪತಿ ದೇವಸ್ಥಾನಕ್ಕೆ ವಿಶೇಷ ಪ್ರವೇಶ ದರ್ಶನ : ಆನ್​​ಲೈನ್​​ ಟಿಕೆಟ್ ಬಿಡುಗಡೆ ಮಾಡಿದ ಟಿಟಿಡಿ

ತಿರುಮಲ: ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಆಡಳಿತ ಮಂಡಳಿತಿಮ್ಮಪ್ಪನ ವಿಶೇಷ ದರ್ಶನಕ್ಕಾಗಿ ಆನ್‌ಲೈನ್ ಮೂಲಕ ಕಾಯ್ದಿರಿಸಲು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 300 ರೂ.gL ಟಿಕೆಟುಗಳನ್ನು ಬಿಡುಗಡೆ ಮಾಡಿದೆ.
ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ವಿಶೇಷ ದರ್ಶನ ಪಡೆಯಲು ಬಯಸುವವರು ಶುಕ್ರವಾರ ಬೆಳಗ್ಗೆ 9 ರಿಂದ ಟಿಕೆಟ್​​ ಕಾಯ್ದಿರಿಸಬಹುದಾಗಿದೆ ಎಂದು ತಿಳಿಸಲಾಗಿದ್ದು, ಟಿಕೆಟ್‌ಗಳನ್ನು ವರ್ಚುಯಲ್‌ ಮಾದರಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ ತಿಂಗಳಿನಲ್ಲಿ ಸರ್ವ ದರ್ಶನದ ಟಿಕೆಟ್‌ಗಳನ್ನು ಶನಿವಾರ ಬೆಳಗ್ಗೆ 9 ರಿಂದ ಆನ್‌ಲೈನ್ ಬುಕಿಂಗ್‌ಗೆ ಅವಕಾಶ ನೀಡಲಾಗುವುದು ಎಂದು ದೇವಾಲಯ ಆಡಳಿತ ಮಂಡಳಿಯೂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರತಿನಿತ್ಯ 12 ಸಾವಿರ ಟೋಕನ್‌ಗಳು ಲಭ್ಯ ಇದೆ. ಹಾಗೆಯೇ ನವೆಂಬರ್ ಕೋಟಾದ ಸರ್ವ ದರ್ಶನ ಟಿಕೆಟ್​​​ ಸ್ಲಾಟ್ ಅನ್ನು ಭಾನುವಾರ ಬೆಳಗ್ಗೆ 9ಗಂಟೆಗೆ ತೆರೆಯಲಿದ್ದು, ಭಕ್ತರು ಆನ್​​ಲೈನ್​ ಮೂಲಕ ಬುಕಿಂಗ್​ ಮಾಡಬಹುದು ಎಂದು ಹೇಳಲಾಗಿದೆ.
ಕೊವಿಡ್​ 19 ನೆಗೆಟಿವ್​ ವರದಿ ಕಡ್ಡಾಯ ಎಂಬ ನಿಯಮವನ್ನು ಈಗಾಗಲೇ ಟಿಟಿಡಿ ಜಾರಿಗೊಳಿಸಿದೆ. ಆದರೆ ದೇಗುಲಕ್ಕೆ ಭೇಟಿ ನೀಡಲು ನಿಗದಿಪಡಿಸಿರುವ ಭಕ್ತರ ಸಂಖ್ಯಾ ಮಿತಿ ಹೆಚ್ಚಳ ಮಾಡಬೇಕು ಎಂಬ ಒತ್ತಡವೂ ಹೆಚ್ಚಾಗುತ್ತಿವೆ. ಈಗ ಒಂದು ದಿನಕ್ಕೆ 30,000ಕ್ಕಿಂತಲೂ ಕಡಿಮೆ ಭಕ್ತರು ತಿರುಮಲ ದೇವರ ದರ್ಶನಕ್ಕೆ ಆಗಮಿಸಲು ನಿಗದಿ ಮಾಡಲಾಗಿದೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement