ಸಮವಸ್ತ್ರದಲ್ಲಿ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದ ಪೊಲೀಸರ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಬೀದರ್‌ನ ಶಾಹೀನ್‌ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.
ಬೀದರಿನ ಶಾಹೀನ್‌ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಗೆ (ಸಿಎಎ) ಸಂಬಂಧಿಸಿದಂತೆ ಕಳೆದ ವರ್ಷ ಮಕ್ಕಳು ಪ್ರಸ್ತುತಪಡಿಸಿದ್ದ ನಾಟಕವನ್ನು ಆಧಾರವಾಗಿಸಿಕೊಂಡು ಶಾಲೆಯ ವಿರುದ್ಧ ದಾಖಲಿಸಲಾಗಿದ್ದ ರಾಷ್ಟ್ರದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.
ಪೊಲೀಸ್‌ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದು ಮಕ್ಕಳನ್ನು ವಿಚಾರಣೆಗೆ ಒಳಪಡಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಮೂರ್ನಾಲ್ಕು ದಿನಗಳಲ್ಲಿ ಅನುಪಾಲನಾ ವರದಿ ಸಲ್ಲಿಸಲಾಗುವುದು. ಸುತ್ತೋಲೆಯಲ್ಲಿ ಎರಡನೇ ನಿರ್ದೇಶನವಾದ ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ಈ ಸಂಬಂಧ ಮೂರು ವಾರಗಳಲ್ಲಿ ಅನುಪಾಲನಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು” ಎಂದು ಪೀಠ ಆದೇಶದಲ್ಲಿ ಹೇಳಿದೆ. ಅಲ್ಲದೇ ವಿಚಾರಣೆಯನ್ನು ಡಿಸೆಂಬರ್‌ 1ಕ್ಕೆ ಮುಂದೂಡಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement