ಟಾಟಾ ಕಂಪನಿ ಸಹಯೋಗದಲ್ಲಿ 4,636 ಕೋಟಿ ರೂ. ವೆಚ್ಚದಲ್ಲಿ 150 ಐಟಿಟಿ : ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ‘ಉದ್ಯೋಗ’ ಕಾರ್ಯದಕ್ರಮಡಿ ಟಾಟಾ ಕಂಪನಿಯ ಸಹಯೋಗದಲ್ಲಿ 4,636 ಕೋಟಿ ರೂ.ಗಳ ವೆಚ್ಚದಲ್ಲಿ 150 ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಟಿ) ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು ಇನ್ನೆರಡು ವಾರದಲ್ಲಿ ಉದ್ಘಾಟನೆಯಾಗಲಿವೆ ಎಂದು ಐಟಿಬಿಟಿ ಸಚಿವ ಡಾ. ಸಿ.ಎನ್.ಅಶ್ವಥ್‌ ನಾರಾಯಣ ತಿಳಿಸಿದರು.

ನಗರದ ಪೀಣ್ಯದಲ್ಲಿ ಮೇಲ್ದರ್ಜೆಗೇರಿಸಿರುವ ಸರ್ಕಾರಿ ಐಟಿಐ ಕೇಂದ್ರವನ್ನು ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಧುನಿಕ ಕೋರ್ಸುಗಳನ್ನು ಒಳಗೊಂಡ ತರಬೇತಿಯು ಈ ಕೇಂದ್ರಗಳಲ್ಲಿ ನ.1ರಿಂದ ಆರಂಭವಾಗಲಿದೆ. ಈಗಾಗಲೇ ಹೊಸ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.
ಉದ್ಯಮಗಳ ಈಗಿನ ಬೇಡಿಕೆಗೆ ತಕ್ಕಂತೆ ಹೊಸ ಪಠ್ಯಕ್ರಮ ರೂಪಿಸಲಾಗಿದೆ. ಅಡ್ವಾನ್ಸ್ಡ್ ಸಿ.ಎನ್.ಸಿ. ಮಶಿನಿಂಗ್, ಬೇಸಿಕ್ಸ್ ಆಫ್ ಡಿಜೈನ್ ಅಂಡ್ ವರ್ಚ್ಯುಯಲ್ ವೆರಿಫಿಕೇಷನ್, ಆರ್ಟಿಸನ್ ಯೂಸಿಂಗ್ ಅಡ್ವಾನ್ಸ್ಡ್ ಟೂಲ್ಸ್, ಇಂಡಸ್ಟ್ರಿಯಲ್ ರೊಬೊಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್, ಮ್ಯಾನುಫ್ಯಾಕ್ಚರಿಂಗ್ ಪ್ರೊಸೆಸ್ ಕಂಟ್ರೋಲ್ ಅಂಡ್ ಆಟೋಮೇಷನ್ ಮತ್ತು ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್ ಕೋರ್ಸುಗಳು ಇವುಗಳಲ್ಲಿ ಸೇರಿವೆ ಎಂದು ಸಚಿವರು ತಿಳಿಸಿದರು.
ಈ ಸಂಸ್ಥೆಗಳಲ್ಲಿ ಜೆಟಿಒ ಗಳಿಗೆ ಹೊಸ ತಾಂತ್ರಿಕತೆಗಳಲ್ಲಿ ತರಬೇತಿ ನೀಡಲಾಗುತ್ತದೆ. ಇದರಿಂದ ಪ್ರತಿವರ್ಷ 20,000 ಜೆಟಿಒ ಗಳಿಗೆ ಹಾಗೂ ಐಟಿಐ, ಪಾಲಿಟೆಕ್ನಿಕ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಸುಮಾರು 1 ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಪ್ರಯೋಜನವಾಗುತ್ತದೆ ಎಂದರು.
ಟಾಟಾ ಕಂಪನಿಯೊಂದಿಗೆ ದೀರ್ಘಾವಧಿ ಸಹಭಾಗಿತ್ವ ಹೊಂದುವ ಉದ್ದೇಶವಿದ್ದು ಮೊದಲ ಎರಡು ವರ್ಷಗಳಿಗಾಗಿ 300 ಹಾಗೂ ಮೂರನೇ ವರ್ಷಕ್ಕಾಗಿ 150 ವಿಷಯ ಪರಿಣತರನ್ನು ನಿಯೋಜಿಸಲಾಗುತ್ತದೆ ಎಂದು ಸಚಿವರು ಹೇಳಿದರು.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement