ಬೆಳಗಾವಿ ಜಿಲ್ಲೆಯಲ್ಲೊಂದು ಹೃದಯ ವಿದ್ರಾವಕ ಘಟನೆ, ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ

ಬೆಳಗಾವಿ: ತಂದೆಯೊಬ್ಬ ತನ್ನ ನಾಲ್ವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೋರಗಲ್​​ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನ ಹಾದಿಮನಿಗೆ (8) ವಿಷವುಣಿಸಿ ತಂದೆ ಗೋಪಾಲ ಹಾದಿಮನಿ(46) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬ್ಲಾಕ್ ಫಂಗಸ್​ನಿಂದ ಪತ್ನಿ ಮೃತಪಟ್ಟಿದ್ದರು. ಇದರಿಂದ ಮನನೊಂದು ನಾಲ್ವರ ಮಕ್ಕಳ ಜತೆ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ಜುಲೈ 6 ರಂದು ಗೋಪಾಲ್‌ ಅವರ ಪತ್ನಿ ಜಯಾ ಬ್ಲಾಕ್ ಫಂಗಸ್ಸಿನಿಂದ ಮೃತಪಟ್ಟಿದ್ದರು. ಇದರಿಂದ ನಂದಿ ನಿವೃತ್ತ ಯೋಧರೂ ಆಗಿರುವ ಗೋಪಾಲ ಹಾದಿಮನಿ ತಮ್ಮ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನೀರಿನಲ್ಲಿ ವಿಷ ಬೆರಸಿ ವಿಷ ಸೇವಿಸಿಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿಯೇ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಪೊಲೀಸರು, ವಿಷದ ಬಾಟಲಿಗಾಗಿ ಶೋಧ ನಡೆಸುತ್ತಿದ್ದಾರೆ. ಮೃತ ದುರ್ದೈವಿ ಗೋಪಾಲ್ ಹಾದಿಮನಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು ಎಂದು ಹೇಳಲಾಗಿದೆ. ಇಬ್ಬರು ಮಕ್ಕಳು ಸಂಕೇಶ್ವರ ಪಟ್ಟಣದಲ್ಲಿರುವ ಕಾಲೇಜಿಗೆ ಹೋಗುತ್ತಿದ್ದರು. ಮತ್ತಿಬ್ಬರು ಮಕ್ಕಳು ಗ್ರಾಮದಲ್ಲೇ ಶಾಲೆಗೆ ಹೋಗುತ್ತಿದ್ದರು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಯುದ್ಧ ನಿಲ್ಲಿಸುವಂತೆ ಅಮೆರಿಕಕ್ಕೆ ಪಾಕಿಸ್ತಾನ ಗೋಗರೆದಿದ್ದೇಕೆ..? ಭಾರತದ ಬ್ರಹ್ಮೋಸ್‌ ಶಕ್ತಿಗೆ ಪಾಕ್‌ ಪರಮಾಣು ಶಸ್ತ್ರಾಗಾರದ ಬಳಿಯ ಮಿಲಿಟರಿ ನೆಲೆಗಳು ಧ್ವಂಸ ; ಪಾಕ್‌ ಕಂಗಾಲು...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement