ಭಾರತದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರಲ್ಲ, ನಮಗೆ ಆ ಬಣ್ಣ ನೀಡಲಾಗಿದೆ: ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್

ಬೆಂಗಳೂರು: ಭಾರತದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರಲ್ಲ ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಕೆ. ರೆಹಮಾನ್ ಖಾನ್ ಶನಿವಾರ ಹೇಳಿದ್ದಾರೆ ಮತ್ತು ಅವರು ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಬೇಕೆಂದು ಸಲಹೆ ನೀಡಿದರು.
ರಾಜ್ಯಸಭಾ ಮಾಜಿ ಉಪ ಸಭಾಪತಿ ಅವರು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 30ರ ಹಾನಗಲ್‌ ಮತ್ತು ಸಿಂದಗಿ ಉಪಚುನಾವಣೆಗೆ ಮುನ್ನ ಮುಸ್ಲಿಂ ಬೆಂಬಲಕ್ಕಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಕೆಸರೆರಚಾಟದ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.
ದೇಶದಲ್ಲಿ 20-22 ಕೋಟಿ ಮುಸ್ಲಿಮರಿದ್ದಾರೆ. ನನ್ನ ಪ್ರಕಾರ ಅವರು ಅಲ್ಪಸಂಖ್ಯಾತರಲ್ಲ. 20-22 ಕೋಟಿ ಜನರು ಅಲ್ಪಸಂಖ್ಯಾತರಾಗುವುದು ಹೇಗೆ ಸಾಧ್ಯ? ನಮಗೆ ಆ ಬಣ್ಣವನ್ನು ನೀಡಲಾಗಿದೆ “ಎಂದು ಖಾನ್ ಹೇಳಿದರು.
ಮುಸ್ಲಿಮರ ಕೈಹಿಡಿಯಲು ಯಾವುದೇ ರಾಜಕೀಯ ಪಕ್ಷ ಬೇಕಿಲ್ಲ. ಅದಕ್ಕೆ ಸಂವಿಧಾನ ಒಂದೇ ಸಾಕು‌ ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಹೇಳಿದ್ದಾರೆ.

ಹಿರಿಯ ನಾಯಕ ಮುಸ್ಲಿಮರನ್ನು ಮತ ಬ್ಯಾಂಕ್ ಎಂದು ಪರಿಗಣಿಸುವ ಪ್ರಯತ್ನಗಳನ್ನು ಖಂಡಿಸಿದರು. “ಅವರು ಬೇರೆಯವರಂತೆ ನಾಗರಿಕರು. ಯಾರಿಗೆ ಮತ ಹಾಕಬೇಕು ಎಂದು ತಿಳಿದುಕೊಳ್ಳುವ ಬುದ್ಧಿವಂತಿಕೆ ಅವರಿಗಿಲ್ಲವೇ? ಅಲ್ಪಸಂಖ್ಯಾತರು ಬಳಕೆಗೆ ಯೋಗ್ಯರೇ, ”ಎಂದು ಅವರು ಕೇಳಿದರು.
ನಮ್ಮದು ಜ್ಯಾತ್ಯತೀತ ದೇಶ. ಕಾಂಗ್ರೆಸ್ ಕೂಡ ಜ್ಯಾತ್ಯತೀತ ಪಕ್ಷ. ಹೀಗಾಗಿ ಮುಸ್ಲಿಂ ಸಮುದಾಯ ಕಾಂಗ್ರೆಸ್ ಜೊತೆ ಇದೆ. ನಾಳೆ ಬಿಜೆಪಿ ಜ್ಯಾತ್ಯತೀತ ಪಕ್ಷವಾದರೆ ಮುಸ್ಲಿಮರು ಬಿಜೆಪಿ ಜೊತೆ ಕೂಡ ಇರುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.
ಸಿ.ಎಂ. ಇಬ್ರಾಹಿಂ ಪಕ್ಷದ ಹಿರಿಯ ನಾಯಕರು. ಅವರನ್ನು ಮೇಲ್ಮನೆ ವಿಪಕ್ಷ ನಾಯಕರನ್ನಾಗಿ ಮಾಡಬೇಕೋ ಬೇಡವೋ ಎಂಬುದಕ್ಕೆ ಸಮಾಜದ ಬಣ್ಣ ಕೊಡುವುದು ಬೇಡ. ಅವರು ಜೆಡಿಎಸ್ ನಿಂದ ಕಾಂಗ್ರೆಸ್‌ಗೆ ಸೇರಿದಾಗ ಸಚಿವರನ್ನಾಗಿ ಮಾಡಲಾಗಿತ್ತು. ಗುಂಡೂರಾವ್ ಸರ್ಕಾರದಲ್ಲಿ ಅವರು ಮಂತ್ರಿಯಾಗಿದ್ದರು. ನನಗೆ ಅಧಿಕಾರ ನೀಡಿದ್ದೂ ಕೂಡ ಕಾಂಗ್ರೆಸ್ ಪಕ್ಷವೇ. ಕಾಂಗ್ರೆಸ್ ಪಕ್ಷ ಇಬ್ರಾಹಿಂಗೆ ಅಧಿಕಾರ ನೀಡಲಿಲ್ಲವೇ ಎಂದು ತಿರುಗೇಟು ನೀಡಿದರು.
ಉಗ್ರಪ್ಪ-ಸಲೀಂ ಡಿ.ಕೆ ಶಿವಕುಮಾರ್ ಕುರಿತ ಸಂಭಾಷಣೆ ವಿಚಾರವಾಗಿ ಶಿಸ್ತು ಸಮಿತಿ ನೀಡಿದ್ದ ನೋಟಿಸ್ ಗೆ ಉತ್ತರ ನೀಡಿದ್ದಾರೆ. ನಾನಿನ್ನೂ ಅವರ ಉತ್ತರ ನೋಡಿಲ್ಲ. ಶಿಸ್ತು ಸಮಿತಿ ಸಭೆಯಲ್ಲಿ ಅವರ ಉತ್ತರ ನೋಡ್ತೇವೆ. ಸಲೀಂ ಮಾತಾಡಿದ್ದು ಮೇಲ್ನೋಟಕ್ಕೆ ಸ್ಪಷ್ಟವಾಗಿತ್ತು. ಲೂಸ್ ಟಾಕ್ ಎನ್ನುವುದು ಗೊತ್ತಾಗಿತ್ತು. ಹೀಗಾಗಿ ಅವರ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ. ಆದರೆ ಉಗ್ರಪ್ಪ ಮಾತು ಸ್ಪಷ್ಟವಾಗಿಲ್ಲ. ಅವರು ನಗೆಯಾಡಿದ್ದು ಮಾತ್ರ ಕಾಣಿಸುತ್ತಿತ್ತು.
ಕೆಪಿಸಿಸಿ ಅಧ್ಯಕ್ಷರನ್ನು ನಾವೇ ನೇಮಕ ಮಾಡಿದ್ದು ಎಂದಿರುವುದೇನೂ ಮಹಾ ತಪ್ಪಲ್ಲ ಎಂದು ರೆಹಮಾನ್ ಖಾನ್ ಸ್ಪಷ್ಟನೆ ನೀಡಿದರು.
ಮಾಜಿ ಕೇಂದ್ರ ಸಚಿವ ದಿ.ಜಾಫರ್ ಷರೀಫ್ ಮೊಮ್ಮಗನನ್ನ ಸೋಲಿಸಿದ್ದು ಸಿದ್ದರಾಮಯ್ಯ ಎಂಬ ಹೆಚ್‌.ಡಿ ಕುಮಾರಸ್ವಾಮಿ ಆರೋಪ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರೆಹಮಾನ್ ಖಾನ್, ಜಾಫರ್ ಷರೀಫ್ ಮೊಮ್ಮಗನಿಗೆ ಜೆಡಿಎಸ್‌ನಿಂದ ಟಿಕೆಟ್ ಕೊಟ್ಟು ಗೆಲ್ಲಿಸಬೇಕಿತ್ತು. ಕುಮಾರಸ್ವಾಮಿ ಹೇಳಿಕೆ ಎಲ್ಲವೂ ಸತ್ಯವಲ್ಲ. ಹಾಗಿದಿದ್ದರೆ ಜಾಫರ್ ಷರೀಫ್ ಮೊಮ್ಮಗನಿಗೆ ಕುಮಾರಸ್ವಾಮಿ ಟಿಕೆಟ್ ಕೊಟ್ಟು ಗೆಲ್ಲಿಸಬೇಕಿತ್ತು. ಅವರು ಏಕೆ ಹಾಗೆ ಮಾಡಲಿಲ್ಲ ಎಂದು ತಿರುಗೇಟು‌ ನೀಡಿದರು.

ಪ್ರಮುಖ ಸುದ್ದಿ :-   ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement