ಜಮ್ಮು-ಕಾಶ್ಮೀರ: ಮೊದಲು ಗಡಿ ನಿರ್ಣಯ, ನಂತರ ರಾಜ್ಯ ಸ್ಥಾನಮಾನ-ಅಮಿತ್ ಶಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ಶನಿವಾರ ಭೇಟಿ ನೀಡಿದ್ದ ಕೇಂದ್ರ ಗೃಹಸಚಿವ ಅಮಿತ್ ಶಾ ಕಾಶ್ಮೀರ ರಾಜ್ಯ ಸ್ಥಾನಮಾನವನ್ನು ಗಡಿ ನಿರ್ಣಯ(ಡಿಲಿಮಿಟೇಷನ್) ಹಾಗೂ ವಿಧಾನಸಭಾ ಚುನಾವಣೆ ಬಳಿಕ ಪುನರ್ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
370ನೇ ವಿಧಿ ತೆಗೆದುಹಾಕಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಶನಿವಾರ ಅವರು ಶ್ರೀನಗರದ ಯುವ ಸಂಘ-ಸಂಸ್ಥೆಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಗಡಿ ನಿರ್ಣಯವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಗಡಿ ನಿರ್ಣಯ ಆಗಿಯೇ ಆಗುತ್ತದೆ. ಆದರೆ ಚುನಾವಣೆ ಬಳಿಕ. ಆಗಲೇ ಕಾಶ್ಮೀರದ ರಾಜ್ಯ ಸ್ಥಾನಮಾನವನ್ನೂ ಪುನರ್ ಸ್ಥಾಪಿಸಲಾಗುವುದು. ಇದರಿಂದಾಗಿ ರಾಜ್ಯದ ಯುವ ಪೀಳಿಗೆಗೆ ಉದ್ಯೋಗಾವಕಾಶಗಳು ಹೆಚ್ಚಲಿದೆ ಎಂದು ಅಮಿತ್‌ ಶಾ ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಭಾಷಣದ ನಡುವೆ ಅಮಿತ್ ಶಾ ಜಮ್ಮು ಕಾಶ್ಮೀರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಯಾರಿಂದಲೂ ತಡೆಗಟ್ಟಲು ಸಾಧ್ಯವಿಲ್ಲ.ರಾಜ್ಯದಲ್ಲಿ ಶಾಂತಿ ಕದಡಲು ಯಾರಾದರೂ ಯತ್ನಿಸಿದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ-ಶಿಕ್ಷಕಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement