ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ, ಒಂದು ಮಗು ಪಾರು

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಮಹಿಳೆ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯಲ್ಲಿ ಒಂದು ಮಗುವನ್ನು ರಕ್ಷಿಸಲಾಗಿದೆ.
ಘಟನೆಯಲ್ಲಿ ತಾಯಿ ಲಕ್ಷ್ಮೀ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತಪಟ್ಟಿದ್ದಾರೆ.
ಬಾವಿಯಲ್ಲಿ ಮುಳುಗುತ್ತಿದ್ದ ಈಶ್ವರಿ (4)ಯನ್ನು ಸ್ಥಳೀಯರು ರಕ್ಷಿಸಿದ್ದಾರೆ‌.
ಮೂವರೂ ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಮನೆಯವರು ಲಕ್ಷ್ಮಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಗ್ರಾಮದ ಹೊರವಲಯದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯಿಂದ ಸತ್ಯ ಹೊರಬರಬೇಕಿದೆ. ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

5 / 5. 1

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

ನಿಮ್ಮ ಕಾಮೆಂಟ್ ಬರೆಯಿರಿ

advertisement