ಕರ್ನಾಟಕದಲ್ಲಿ ನಾಳೆಯಿಂದ 1ರಿಂದ 5ನೇ ತರಗತಿ ವರೆಗೆ ಶಾಲೆ ಆರಂಭ; ಅನುಸರಿಸಬೇಕಾದ ಮಾರ್ಗಸೂಚಿಗಳು ಇಲ್ಲಿವೆ

ಬೆಂಗಳೂರು: ನಾಳೆಯಿಂದ (ಸೋಮವಾರ) ರಾಜ್ಯಾದ್ಯಂತ 1ರಿಂದ 5ನೇ ತರಗತಿ ವರೆಗೆ ಶಾಲೆಗಳು ತೆರೆಯಲಿವೆ. ಹೀಗಾಗಿ ಮಕ್ಕಳು ಶಾಲೆಗೆ ಹೋಗುವ ಸಿದ್ಧತೆಯಲ್ಲಿದ್ದಾರೆ. ಶಾಲೆಗಳಿ ಸ್ವಾಗತಕ್ಕೆ ಸಿದ್ಧವಾಗಿವೆ.
ಸದ್ಯ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ 1ರಿಂದ 5ನೇ ತರಗತಿ ವರೆಗೆ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೊವಿಡ್ ನಿಯಮದಂತೆ ಭೌತಿಕ ತರಗತಿಗಳು ನಡೆಯಲಿವೆ.
ಪ್ರಾಥಮಿಕ ಶಾಲೆ ಆರಂಭಕ್ಕೆ ಸರ್ಕಾರವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕಠಿಣ ನಿಯಮಗಳ ಪಾಲನೆಯೊಂದಿಗೆ ಪ್ರಾಥಮಿಕ ಶಾಲೆ ಆರಂಭವಾಗುತ್ತಿದೆ. ಭೌತಿಕ ತರಗತಿ ನಡೆಸಲು ರಾಜ್ಯ ಸರ್ಕಾರ ಕೆಲ ಮಾರ್ಗಸೂಚಿಗಳನ್ನು ಹೊರಡಿಸಿದೆ.
* ಶೇ.50 ರಷ್ಟು ಹಾಜರಾತಿಯಲ್ಲಿ ತರಗತಿ ನಡೆಸಲು ಅವಕಾಶ.
* ಮಕ್ಕಳಿಗೆ ಒಂದು ದಿನ ತರಗತಿ ಒಂದು ದಿನ ರಜೆ ನೀಡಲಾಗಿದೆ.
* ಮಕ್ಕಳು ಶಾಲೆಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ
* ಅನುಮತಿ ಪತ್ರದಲ್ಲಿ ವಿದ್ಯಾರ್ಥಿಯ ಕೊವಿಡ್ ಸೋಂಕು ಇಲ್ಲ ಎಂಬುದನ್ನು ಪೋಷಕರು ದೃಢೀಕರಿಸಬೇಕು.
* ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ.
* ಸೋಮವಾರದಿಂದ ಶುಕ್ರವಾರದ ವರೆಗೆ ಮಾತ್ರವೇ ಶಾಲೆಗಳು ತೆರೆಯಬೇಕು.
* ಇನ್ನುಳಿದ ಎರಡು ದಿನ ಶಾಲೆ ಕೊಠಡಿಗಳ ಸ್ವಚ್ಛತಾ ಕಾರ್ಯ, ಸ್ಯಾನಿಟೈಸರ್​ಗೆ ಅವಕಾಶ ನೀಡಲಾಗಿದೆ.
* ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
* ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ತರಗತಿಗೂ ಅವಕಾಶ ನೀಡಲಾಗಿದೆ.
* 15 ರಿಂದ 20 ಮಕ್ಕಳ ತಂಡ ರಚಿಸಿ ಮಕ್ಕಳಿಗೆ ಪಾಠ ಮಾಡಬೇಕು.
* ಎರಡು ಡೋಸ್ ಪಡೆದ ಶಿಕ್ಷಕರಿಗೆ ಮಾತ್ರ ಪಾಠ ಮಾಡಲು ಅವಕಾಶ
* ಸೋಮವಾರದಿಂದ ಶುಕ್ರವಾರದ ವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ತರಗತಿಗಳು ನಡೆಯುತ್ತದೆ.
* ನವೆಂಬರ್ ಎರಡರಿಂದ ಶನಿವಾರ ಬೆಳಗ್ಗೆ 8 ರಿಂದ 11.40 ರ ವರೆಗೆ ಮಾತ್ರ ತರಗತಿ ನಡೆಯುತ್ತದೆ.
* ಯಾವುದೇ ಶಾಲೆಯಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತೆರೆಯಲು ಅವಕಾಶ ಇಲ್ಲ.
* 25 ರಿಂದ ನವೆಂಬರ್ 2ರವರೆಗೂ ಅರ್ಧ ದಿನ ಮಾತ್ರ ತರಗತಿ, ನವೆಂಬರ್ 2 ರಿಂದ ಪೂರ್ತಿ ದಿನ ತರಗತಿ ನಡೆಸಲು ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ನನ್ನ ಬ್ಲ್ಯಾಕ್‌ಮೇಲ್ ಮಾಡಲು ಯತ್ನ ; ಇಬ್ಬರ ಪಾತ್ರದ ಬಗ್ಗೆ ತನಿಖೆ : ಸ್ಟಿಂಗ್‌ ಬಗ್ಗೆ ಮೌನ ಮುರಿದ ಸಿದ್ದರಾಮಯ್ಯ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement