ಕರ್ನಾಟಕದಲ್ಲಿ ಭಾನುವಾರ 388 ಕೊರೊನಾ ಹೊಸ ಪ್ರಕರಣ ದಾಖಲು, ಐವರು ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಭಾನುವಾರ) ಹೊಸದಾಗಿ 388 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ವೇಳೆ ಸೋಂಕಿನಿಂದ 5 ಜನರ ಮೃತಪಟ್ಟಿದ್ದಾರೆ ಹಾಗೂ 586 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,85,986 ಕ್ಕೆ ಏರಿಕೆಯಾಗಿದೆ. 29,39,239 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಹಾಗೂ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,007 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8,711 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 194 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,50,707 ಕ್ಕೆ ಏರಿಕೆಯಾಗಿದೆ. 448 ಸೋಂಕಿತರು ಗುಣಮುಖರಾಗಿದ್ದಾರೆ. ಈ ಮೂಲಕ 12,27,966 ಜನರು ಗುಣಮುಖರಾಗಿದ್ದಾರೆ. ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದಾರೆ. ಈವರೆಗೆ 16,244 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,496 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 2, ಬೆಳಗಾವಿ 4, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 194, ಬೀದರ್ 3, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 7, ಚಿತ್ರದುರ್ಗ 4, ದಕ್ಷಿಣ ಕನ್ನಡ 34, ದಾವಣಗೆರೆ 1, ಧಾರವಾಡ 2, ಗದಗ 0, ಹಾಸನ 25, ಹಾವೇರಿ 0, ಕಲಬುರಗಿ 0, ಕೊಡಗು 6, ಕೋಲಾರ 5, ಕೊಪ್ಪಳ 0, ಮಂಡ್ಯ 5, ಮೈಸೂರು 23, ರಾಯಚೂರು 0, ರಾಮನಗರ 3, ಶಿವಮೊಗ್ಗ 12, ತುಮಕೂರು 37, ಉಡುಪಿ 4, ಉತ್ತರ ಕನ್ನಡ 10, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement