ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ
ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರ ಸಹ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 26ರಂದು ರಾಜ್ಯಕ್ಕೆ ಹಿಂಗಾರು ಪವೇಶಿಸಲಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗಲಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಕ್ಟೋಬರ್ 26ರ ತನಕ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ