ಕುಲಷಿತ ನೀರು ಸೇವನೆಯಿಂದ ಇಬ್ಬರು ಸಾವು, ನಾಲ್ವರು ಅಸ್ವಸ್ಥ

ಮುದ್ದೇಬಿಹಾಳ : ಕಲುಷಿತ ನೀರು ಕುಡಿದು ಇಬ್ಬರು ಮೃತಪಟ್ಟ ಘಟನೆ ತಾಲೂಕಿನ ಯರಗಲ್ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಎರಡು ದಿನಗಳಿಂದ ಈ ಸಮಸ್ಯೆ ಉಲ್ಬಣವಾಗಿದ್ದು ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಮಾಡಿರುವ ಗ್ರಾಮದ ನಿವಾಸಿಗಳು ತೀವ್ರ ಅನಾರೋಗ್ಯಕ್ಕಿಡಾಗಿ ಜೀವಣ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ. ಎರಡು ದಿನಗಳ ಹಿಂದೆ ಮುದ್ದೇಬಿಹಾಳ ತಾಲೂಕಿನ ಯರಗಲ್ ಗ್ರಾಮದಲ್ಲಿ ಕುಡಿಯು ನೀರಿಗೆ ಚರಂಡಿ ನೀರು ಸೇರ್ಪಡೆಗೊಂಡು, ಕಲುಷಿತಗೊಂಡಿದೆ.
ಯರಗಲ್ ಗ್ರಾಮದ ಗುರುರಾಜ್ ಬಸವರಾಜ ಮಳಗಿ(15) ಶನಿವಾರ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಭಾನುವಾರ ನೀಲಮ್ಮ ನಾರಾಯಣಪ್ಪ ಬೆನಕಣ್ಣವರ(65) ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.
ಇದೇ ನೀರು ಕುಡಿದ ಯಕಲ್ ಗ್ರಾಮದ ಇನ್ನೂ ನಾಲ್ವರು ಅಸ್ವಸ್ಥಗೊಂಡು ಮುದ್ದೇಬಿಹಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಊರಿಗೆ ಬಂದಿದ್ದಾರೆ.

 

5 / 5. 1

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement