ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ತಾಲೂಕು ಘಾಟಿ ಬಳಿ ಶನಿವಾರ ತಡರಾತ್ರಿ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡ ಘಟನೆ ವರದಿಯಾಗಿದೆ.
ದೊಡ್ಡಬಳ್ಳಾಪುರ ಮತ್ತು ಗೌರಿಬಿದನೂರು ರಸ್ತೆಯ ಮಧ್ಯೆ ಮಾಕಳಿ ಬೆಟ್ಟದ ಬಳಿ ಘಟನೆ ನಡೆದಿದೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಾಟಿ ದೇವಾಲಯದಲ್ಲಿ ಮದುವೆಗೆ ಮುಗಿಸಿ ಹಿಂದಿರುಗುವಾಗ ನಿಯಂತ್ರಣ ತಪ್ಪಿದ ಬಸ್ ಹಳ್ಳಕ್ಕೆ ಬಿದ್ದಿದೆ. ಗೌರಿಬಿದನೂರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಒಂದು ಸಾವು ಹಾಗೂ ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ಮತ್ತೊಂದು ಸಾವು ಸಂಭವಿಸಿದೆ. ಸುಮಾರು 20 ಮಂದಿಗೆ ಗಾಯಗಳಾಗಿವೆ.
ಶನಿವಾರ ರಾತ್ರಿ ಜೋರು ಮಳೆಯ ನಡುವೆ ಅಪಘಾತ ಸಂಭವಿಸಿದೆ. ಬೆಳಿಗ್ಗೆ ನೋಡಿದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ