ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಬಂಧಿತ ಆರೋಪಿ ಆಶೀಶ್​ ಮಿಶ್ರಾಗೆ ಡೆಂಗ್ಯೂ ; ಆಸ್ಪತ್ರೆಗೆ ದಾಖಲು

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಆಶೀಶ್​ ಮಿಶ್ರಾರಿಗೆ ಅನಾರೋಗ್ಯ ಉಂಟಾಗಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಶೀಶ್​ ಮಿಶ್ರಾ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆಂದು ಹೇಳಲಾಗಿದ್ದು, ಅವರ ರಕ್ತದ ಮಾದರಿ ತಪಾಸಣೆಗಾಗಿ ಕಳುಸಲಾಗಿದೆ.
ಲಖಿಂಪುರ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಆಶೀಶ್​ ಮಿಶ್ರಾರನ್ನು ಜಿಲ್ಲಾ ಕಾರಾಗೃಹದಲ್ಲಿ ಇಡಲಾಗಿತ್ತು. ಅವರೀಗ ಶಂಕಿತ ಡೆಂಗ್ಯೂದಿಂದ ಬಳಲುತ್ತಿರುವ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈಲು ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಆಶೀಶ್ ಮಿಶ್ರಾ ಜ್ವರದ ಬಗ್ಗೆ ಮಾಹಿತಿ ನೀಡಿರುವ ಲಖಿಂಪುರ ಖೇರಿ ಜಿಲ್ಲಾ ಕಾರಾಗೃಹದ ಪೊಲೀಸ್​ ಅಧೀಕ್ಷಕ ಪಿಪಿ ಸಿಂಗ್, ಆಶೀಶ್​ ಮಿಶ್ರಾಗೆ ಜ್ವರ ಇರುವುದು ನಿಜ. ಆದರೆ ಡೆಂಗ್ಯೂ ಹೌದೋ ಅಲ್ಲವೋ ಗೊತ್ತಾಗುತ್ತಿಲ್ಲ. ಲಕ್ಷಣಗಳು ಡೆಂಗ್ಯೂದಂತೆ ಇವೆ. ರಕ್ತದ ಮಾದರಿಯ ತಪಾಸಣೆ ವರದಿ ಬಂದ ಬಳಿಕವಷ್ಟೇ ನಿಖರವಾಗಿ ಗೊತ್ತಾಗಲಿದೆ ಎಂದಿದ್ದಾರೆ.
ಅಕ್ಟೋಬರ್​ 3ರಂದು ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹರಿದು, ಹಿಂಸಾಚಾರ ಉಂಟಾಗಿತ್ತು. ಅದರಲ್ಲಿ 8 ಮಂದಿ ಮೃತಪಟ್ಟಿದ್ದಾರೆ. ಪ್ರತಿಭಟನಾ ನಿರತ ರೈತರ ಮೇಲೆ ಹರಿದಿರುವ ವಾಹನದಲ್ಲಿ, ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಇದ್ದಾರೆ ಎಂಬ ಆರೋಪದಡಿ ಅವರನ್ನು ಬಂಧಿಸಲಾಗಿದೆ.

ಪ್ರಮುಖ ಸುದ್ದಿ :-   ಆಪರೇಶನ್‌ ಸಿಂಧೂರ ಸೇನಾ ಕಾರ್ಯಾಚರಣೆ ನಂತರ ಬ್ರಹ್ಮೋಸ್ ಕ್ಷಿಪಣಿಗೆ ಬಂತು ಭಾರೀ ಬೇಡಿಕೆ ; ಖರೀದಿಸಲು 17 ದೇಶಗಳು ಕ್ಯೂನಲ್ಲಿ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement