ಒಬಿಸಿ, ಇಡಬ್ಲ್ಯೂಎಸ್ ಅರ್ಜಿ ವಿಚಾರಣೆ ಮುಗಿಯುವ ವರೆಗೂ ನೀಟ್ ಪಿಜಿ ಕೌನ್ಸೆಲಿಂಗ್‌ಗೆ ಬ್ರೇಕ್ ಹಾಕಿದ ಸುಪ್ರೀಂ ಕೋರ್ಟ್‌

ನವದೆಹಲಿ: ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶ ಕಲ್ಪಿಸುವ ನೀಟ್ ಪಿಜಿ ಕೌನ್ಸೆಲಿಂಗ್‌ ತಡೆಹಿಡಿಯುವಂತೆ ಸುಪ್ರೀಂಕೋರ್ಟ್‌ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.
ಒಬಿಸಿ, ಇಡಬ್ಲ್ಯೂಎಸ್ ಮೀಸಲು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ನೀಟ್ ಸ್ನಾತಕೋತ್ತರ ಕೋರ್ಸ್ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಡೆಹಿಡಿಯಬೇಕೆಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.
ಆರ್ಥಿಕವಾಗಿ ಹಿಂದುಳಿದ ವರ್ಗದವರ (ಇಡಬ್ಲ್ಯೂಎಸ್) ಕೋಟಾ ಸೀಟು ಪಡೆಯಲು ಕೇಂದ್ರ ಸರ್ಕಾರದಿಂದ ಆದಾಯ ಮಿತಿ ನಿಗದಿ ಮಾಡಲಾಗಿದ್ದು, ವಾರ್ಷಿಕ 8 ಲಕ್ಷ ರೂ. ಆದಾಯ ಮಿತಿ ನಿಗದಿಯಾಗಿದೆ. ಈ 8 ಲಕ್ಷ ರೂ. ಆದಾಯ ಮಿತಿ ನಿಗದಿಯನ್ನು ಸವೋಚ್ಚ ನ್ಯಾಯಾಲಯ ಯಾವ ಮಾನದಂಡದ ಮೇಲೆ ನಿಗದಿ ಮಾಡಲಾಗಿದೆ ಎಂದು ಪ್ರಶ್ನಿಸಿದೆ. ಈ ಹಿನ್ನೆಲೆಯಲ್ಲಿ ಎಂಡಿಎಸ್ ಕೋರ್ಸ್‌ಗಳಿಗೆ ನಡೆಸಬೇಕಾಗಿದ್ದ ಕೌನ್ಸಿಲಿಂಗ್‌ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) ಮೀಸಲಾತಿಯನ್ನು ಪರಿಚಯಿಸುವ ಕೇಂದ್ರದ ನಿರ್ಧಾರದ ಸಿಂಧುತ್ವವನ್ನು ನ್ಯಾಯಾಲಯ ನಿರ್ಧರಿಸುವ ವರೆಗೆ ನೀಟ್-ಪಿಜಿಗೆ ಕೌನ್ಸೆಲಿಂಗ್ ಪ್ರಾರಂಭಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.
ಈ ಭರವಸೆಯನ್ನು ದಾಖಲಿಸಿದ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ನ್ಯಾಯಾಲಯವು ನಿರ್ಧಾರ ತೆಗೆದುಕೊಳ್ಳುವ ಮೊದಲು ಕೌನ್ಸೆಲಿಂಗ್ ನಡೆದರೆ, “ವಿದ್ಯಾರ್ಥಿಗಳು ಗಂಭೀರ ಸಮಸ್ಯೆಗೆ ಸಿಲುಕುತ್ತಾರೆ” ಎಂದು ಗಮನಿಸಿದರು. ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆಎಂ ನಟರಾಜ್ ಅವರು ಈ ಭರವಸೆ ನೀಡಿದರು.

ಪ್ರಮುಖ ಸುದ್ದಿ :-   ಸೇನಾಧಿಕಾರಿ ಸೋಫಿಯಾ ಕುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಮಧ್ಯಪ್ರದೇಶ ಸಚಿವನ ವಿರುದ್ಧ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

ನೀಟ್ ಪಿಜಿ ಫಲಿತಾಂಶವನ್ನು ಈ ಮೊದಲು ಅಕ್ಟೋಬರ್ ೨೮ರಂದು ಘೋಷಿಸಲಾಗಿತ್ತು. ಅಕ್ಟೋಬರ್ ೯ರಂದು ನೀಟ್ ಪರೀಕ್ಷೆಯ ಸ್ಕೋರ್ ಕಾರ್ಡ್ ಬಿಡುಗಡೆ ಮಾಡಲಾಗಿತ್ತು. ನೀಟ್ ಪರೀಕ್ಷೆಯನ್ನು ಈ ಬಾರಿ ಇಂಗ್ಲಿಷ್ ಸೇರಿದಂತೆ 10 ಇತರ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗಿದೆ. ಹಿಂದಿ, ಕನ್ನಡ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕುರಾಠಿ, ಒಡಿಯಾ, ತಮಿಳು, ತೆಲುಗು ಮತ್ತು ಉರ್ದು ಭಾಷೆಯಲ್ಲಿ ಪರೀಕ್ಷೆ ನಡೆದಿದೆ.
ಕೇಂದ್ರ ಸರ್ಕಾರವು ಎಂಡಿಎಸ್ ಸೀಟ್‌ಗೆ ಒಬಿಸಿಗೆ ಶೇ. 27ರಷ್ಟು ಮೀಸಲು, ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ. 10ರಷ್ಟು ಮೀಸಲು ನೀಡುವುದನ್ನು ಜಾರಿಗೊಳಿಸಿತ್ತು.
ಇದನ್ನು ಪ್ರಶ್ನಿಸಿ ಸವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆ ಇನ್ನೂ ಮುಕ್ತಾಯಗೊಂಡಿಲ್ಲ. ಹೀಗಾಗಿ, ಅಖಿಲ ಭಾರತ ಕೋಟಾದಡಿ ಒಬಿಸಿ ಹಾಗೂ ಇಡಬ್ಲುಎಸ್ ಮೀಸಲಾತಿ ಬಗ್ಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರದ ಸಿಂಧುತ್ವದ ಬಗ್ಗೆ ನಿರ್ಧಾರವಾಗುವವರೆಗೂ ನೀಟ್-ಪಿಜಿ ಕೌನ್ಸೆಲಿಂಗ್‌ ಸ್ಥಗಿತಗೊಳಿಸಲು ಸುಪ್ರೀಂಕೋರ್ಟ್‌ ಆದೇಶ ಮಾಡಿದೆ.

ಪ್ರಮುಖ ಸುದ್ದಿ :-   ಆಪರೇಷನ್ ಸಿಂಧೂರ | ಷೇರು ಮಾರುಕಟ್ಟೆಯಲ್ಲಿ ಭಾರತದ ರಕ್ಷಣಾ ಕಂಪನಿಗಳಿಗೆ ಹೆಚ್ಚಿದ ಬೇಡಿಕೆ, ಚೀನಾ-ಟರ್ಕಿ ಕಂಪನಿಗಳ ಬೇಡಿಕೆ ಕುಸಿತ...!

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement