ಕರ್ನಾಟಕದಲ್ಲಿ290 ಜನರಿಗೆ ಹೊಸದಾಗಿ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) 290 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ, ಇದೇ ಸಮಯದಲ್ಲಿ 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಹಾಗೂ 408 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,86,276 ಕ್ಕೆ ಏರಿಕೆಯಾಗಿದ್ದು, ಒಟ್ಟು 38,017 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ 29,39,647 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 8583 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.32 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಇಂದು 137 ಜನರಿಗೆ ಸೋಂಕು ತಗುಲಿದ್ದು, 6 ಜನ ಮೃತಪಟ್ಟಿದ್ದಾರೆ. 206 ಜನ ಗುಣಮುಖರಾಗಿದ್ದಾರೆ. 6421 ಸಕ್ರಿಯ ಪ್ರಕರಣಗಳಿವೆ.

ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 137, ಬೀದರ್ 0, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 6, ಚಿತ್ರದುರ್ಗ 1, ದಕ್ಷಿಣ ಕನ್ನಡ 30, ದಾವಣಗೆರೆ 0, ಧಾರವಾಡ 2, ಗದಗ 0, ಹಾಸನ 20, ಹಾವೇರಿ 0, ಕಲಬುರಗಿ 3, ಕೊಡಗು 7, ಕೋಲಾರ 7, ಕೊಪ್ಪಳ 1, ಮಂಡ್ಯ 4, ಮೈಸೂರು 18, ರಾಯಚೂರು 0, ರಾಮನಗರ 0, ಶಿವಮೊಗ್ಗ 3, ತುಮಕೂರು 26, ಉಡುಪಿ 4, ಉತ್ತರ ಕನ್ನಡ 15, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ
ಮೃತಪಟ್ಟವರ ಸಂಖ್ಯೆ:
ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 6, ಧಾರವಾಡ 1, ರಾಮನಗರ 1, ಸೇರಿ ರಾಜ್ಯದಲ್ಲಿ 10 ಜನರು ಮೃತಪಟ್ಟಿದ್ದಾರೆ.

ಪ್ರಮುಖ ಸುದ್ದಿ :-   ಗದಗ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement