ಟಿ-20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಗೆಲುವನ್ನು ‘ಇಸ್ಲಾಮಿನ ವಿಜಯ’ ಎಂದು ಹೇಳಿದ ಪಾಕ್ ಸಚಿವ, ವೀಕ್ಷಿಸಿ

ಪಾಕಿಸ್ತಾನದ ಆಂತರಿಕ ಸಚಿವ ಶೇಖ್ ರಶೀದ್ ಅವರು ಟಿ-20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನದ ಗೆಲುವನ್ನು ‘ಇಸ್ಲಾಮಿನ ವಿಜಯ’ ಎಂದು ಹೇಳಿದ್ದಾರೆ.
ಈ ಪಂದ್ಯದಲ್ಲಿ ಪಾಕಿಸ್ತಾನ 10 ವಿಕೆಟ್‌ಗಳಿಂದ ಗೆದ್ದ ಬೆನ್ನಲ್ಲೇ ರಶೀದ್ ಈ ಹೇಳಿಕೆ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಶೇಖ್ ರಶೀದ್ ಹೇಳುವಂತೆ ಭಾರತದ ಮುಸ್ಲಿಮರು ಸೇರಿದಂತೆ ವಿಶ್ವದಾದ್ಯಂತ ಮುಸ್ಲಿಮರು ಪಂದ್ಯದ ಸಮಯದಲ್ಲಿ ಪಾಕಿಸ್ತಾನವನ್ನು ಬೆಂಬಲಿಸಿದ್ದಾರೆ. ಪಾಕಿಸ್ತಾನಕ್ಕೆ, ಇಂದಿನ ಭಾರತ-ಪಾಕಿಸ್ತಾನ ಪಂದ್ಯವೇ ಅಂತಿಮ” ಎಂದು ಟಿ-20 ವಿಶ್ವಕಪ್ಪಿನ ಅಂತಿಮ ಪಂದ್ಯ ಸಚಿವ ಶೇಖ್ ರಶೀದ್ ಹೇಳಿದರು.
ಪಾಕಿಸ್ತಾನದ ಆಟಗಾರರಾದ ಮೊಹಮ್ಮದ್ ರಿಜ್ವಾನ್ ಮತ್ತು ನಾಯಕ ಬಾಬರ್ ಅಜಮ್ ಅವರ ಅದ್ಭುತ ಪ್ರದರ್ಶನದ ನಂತರ ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ. ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಿತು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement