ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಡಿ.6ರಂದು ದೇಶಾದ್ಯಂತ ಬೃಹತ್ ಪ್ರತಿಭಟನೆ

ಬೆಂಗಳೂರು: ಜಮ್ಮು- ಕಾಶ್ಮೀರ, ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮಾರಣ ಹೋಮ ನಡೆಯುತ್ತಿದೆ. ಇದರ ವಿರುದ್ಧ ಡಿ.6 ರಂದು ದೇಶಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗಳು, ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರಾದ ರಾಜಶ್ರೀ ಚೌಧರಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಿಲ ಭಾರತ ಹಿಂದೂ ಮಹಾಸಭಾ ಅನೇಕ ವರ್ಷಗಳಿಂದ ದೇಶದಲ್ಲಿ ಯಾವುದೇ ಸಮಸ್ಯೆಗಳು ಎದುರಾದಾಗ ಅವುಗಳ ವಿರುದ್ಧ ಹೋರಾಟ ಮಾಡಿದೆ. ನಾವು ನ್ಯಾಯ ಒದಗಿಸಿದ್ದೇವೆ ಎಂದರು.
ಇತ್ತೀಚಿನ ದಿನಗಳಲ್ಲಿ ಹಿಂದೂ ಧರ್ಮದ ಮೇಲೆ ಅನ್ಯಕೋಮಿನ ದುರುಳರು ದೌರ್ಜನ್ಯ ಎಸಗುತ್ತಿದ್ದಾರೆ ಜಮ್ಮು-ಕಾಶ್ಮೀರದಲ್ಲಿ ಪಂಡಿತರ ಮಾರಣ ಹೋಮ ಆಗುತ್ತಿದೆ. ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಹಿಂದೂ ದೇವಾಲಯಗಳ ನಾಶ ಆಗುತ್ತಿದೆ ಇವುಗಳ ವಿರುದ್ಧ ಕೇಂದ್ರ ಸರ್ಕಾರ ಗಟ್ಟಿಯಾಗಿ ನಿಲ್ಲಬೇಕು ಎಂದು ಆಗ್ರಹಿಸಿದರು.
ಮಥುರಾದ ಶ್ರೀಕೃಷ್ಣ ದೇವಸ್ಥಾನದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ ಮಸೀದಿಯನ್ನು ಕೂಡಲೇ ತೆರವು ಮಾಡಬೇಕೆಂದು ನಾವು ಹೋರಾಟ ಮಾಡುತ್ತೇವೆ. ಹಾಗೆಯೇ ಈಗಿನ ರಾಜಕೀಯ ವ್ಯಕ್ತಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು ಅವರನ್ನು ಚುನಾವಣೆ ಕಣದಿಂದ ದೂರ ಇರಿಸಬೇಕು, ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ. ಮೆಕಾಲೆ ಶಿಕ್ಷಣ ನೀತಿಯನ್ನು ತೆಗೆದು ಗುರುಕುಲ ಪದ್ಧತಿಯಲ್ಲಿ ಶಿಕ್ಷಣವನ್ನು ಕೊಟ್ಟು ಭವಿಷ್ಯದಲ್ಲಿ ಓದಿದ ಎಲ್ಲರಿಗೂ ಉದ್ಯೋಗ ಸಿಗುವಂತಾಗಬೇಕು ಎಂದು ಅವರು ಹೇಳಿದರು.
ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷರಾದ ಡಿ. ವಿವೇಕಾನಂದ ಸ್ವಾಮಿ , ಕಾರ್ಯದರ್ಶಿ ಚೌಧರಿ ಹಾಗೂ ಹಿಂದೂ ಮಹಾಸಭಾ ಮುಖಂಡರಾದ ಕಠಾರಿ ಬಾಲಕೃಷ್ಣ ಗುರೂಜಿ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಬಿಜೆಪಿಯಿಂದ ಕೆ.ಎಸ್‌. ಈಶ್ವರಪ್ಪ ಉಚ್ಚಾಟನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement