3ನೇ ಅಲೆ ಭೀತಿ: ಕರ್ನಾಟಕದಲ್ಲಿ ಮಕ್ಕಳಿಗೆ ಕೊರೊನಾ ಪರೀಕ್ಷೆ ಹೆಚ್ಚಳ

ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಂಭಾವ್ಯ 3ನೇ ಅಲೆ ಆತಂಕದ ಮಧ್ಯೆ ರಾಜ್ಯದಲ್ಲಿ ಮಕ್ಕಳ ಮೇಲಿನ ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಹೇಳಲಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಸೆ.21 ಮತ್ತು ಅ.21 ರ ನಡುವೆ ನಡೆಸಿದ ಒಟ್ಟು ಪರೀಕ್ಷೆಗಳಲ್ಲಿ ಶೇಕಡಾ 20.8ರಷ್ಟು ಮಕ್ಕಳಿಗೆ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿಸಿದೆ.
ಸಂಭಾವ್ಯ ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ ಒಟ್ಟು ಪರೀಕ್ಷೆಗಳಲ್ಲಿ ಶೇ.10ರಷ್ಟು ಪರೀಕ್ಷೆಯನ್ನು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕಡ್ಡಾಯವಾಗಿ ಮಾಡಬೇಕು ಎಂದು ನಿರ್ದೇಶಿಸಿದೆ.
ಲಸಿಕೆ ಪಡೆದುಕೊಳ್ಳಲು ಮಕ್ಕಳು ಅರ್ಹರಲ್ಲದ ಕಾರಣ ಹಾಗೂ ಈಗಾಗಲೇ ಶಾಲೆಗಳು ಕೂಡ ಪುನರಾರಂಭಗೊಂಡಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ 5,00,31,061 ಪರೀಕ್ಷೆಗಳನ್ನು ನಡೆಸಲಾಗಿದ್ದು, ಇದರಲ್ಲಿ ಶೇ.81 ಕ್ಕಿಂತ ಹೆಚ್ಚು ಆರ್‌ಟಿ-ಪಿಸಿಆರ್ ವಿಧಾನವನ್ನು ಬಳಕೆ ಮಾಡಲಾಗಿದೆ. ಸರ್ಕಾರಿ ಪ್ರಯೋಗಾಲಯಗಳಲ್ಲಿ 3,51,78,814 ಪರೀಕ್ಷೆಗಳನ್ನು ನಡೆಸಲಾಗಿದ್ದರೆ, ಖಾಸಗಿ ಪ್ರಯೋಗಾಲಯಗಳಲ್ಲಿ 1,49,91,638 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ವಾಟ್ಸಾಪ್​ನಲ್ಲಿ ಮದುವೆ ಆಮಂತ್ರಣ ಕಾರ್ಡ್‌ ಬಂದ್ರೆ ಕ್ಲಿಕ್ ಮಾಡುವ ಮುನ್ನ ಎಚ್ಚರ ; ಕ್ಲಿಕ್ ಮಾಡಿ 10 ಲಕ್ಷ ರೂ. ಕಳೆದುಕೊಂಡ ಅಧಿಕಾರಿ !

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement