ಕರ್ನಾಟಕದಲ್ಲಿ ಹೊಸದಾಗಿ 277 ಜನರಿಗೆ ಕೊರೊನಾ ದೃಢ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಮಂಗಳವಾರ) ಹೊಸದಾಗಿ 277 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 7 ಜನರು ಮೃತಪಟ್ಟಿದ್ದಾರೆ. ಹಾಗೂ 343 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,86,553 ಕ್ಕೆ ಏರಿಕೆಯಾಗಿದೆ. 29,39,990 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,024 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 8,510 ಸಕ್ರಿಯ ಪ್ರಕರಭಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 169 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,51,013 ಕ್ಕೆ ಏರಿಕೆಯಾಗಿದೆ. 12,28,295 ಜನರು ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ 16,253 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,464 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 1, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 169, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 4, ಚಿತ್ರದುರ್ಗ 2, ದಕ್ಷಿಣ ಕನ್ನಡ 23, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 18, ಹಾವೇರಿ 0, ಕಲಬುರಗಿ 0, ಕೊಡಗು 4, ಕೋಲಾರ 0, ಕೊಪ್ಪಳ 0, ಮಂಡ್ಯ 4, ಮೈಸೂರು 19, ರಾಯಚೂರು 0, ರಾಮನಗರ 2, ಶಿವಮೊಗ್ಗ 2, ತುಮಕೂರು 6, ಉಡುಪಿ 9, ಉತ್ತರ ಕನ್ನಡ 6, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement