ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮನೆಗೆ ಬಾಂಬ್ ಎಸೆದಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ ಎನ್ಐಎ

ಕೋಲ್ಕತ್ತಾ: ಸೆಪ್ಟೆಂಬರ್ 14 ರಂದು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರ ಮನೆ ಮೇಲೆ ಬಾಂಬ್ ಎಸೆದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಇಬ್ಬರನ್ನು ಬಂಧಿಸಿದೆ.
ಬಂಧಿತರನ್ನು ಉತ್ತರ 24 ಪರಗಣದ ರಾಹುಲ್ ಪಾಸಿ ಮತ್ತು ಬಾದಲ್ ಕುಮಾರ್ ಬಾಸ್ಫೋರ್ ಎಂದು ಗುರುತಿಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎನ್ಐಎ ಅಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್ 14 ರಂದು ಬೆಳಿಗ್ಗೆ 9.30 ರ ಸುಮಾರಿಗೆ ಜಗದ್ದಲ್‌ನಲ್ಲಿರುವ ಅರ್ಜುನ್ ಸಿಂಗ್ ಅವರ ಮನೆಯ ಬಳಿ ದೊಡ್ಡ ಸ್ಫೋಟಗಳು ಕೇಳಿಬಂದಿದ್ದವು. ಅವರ ಮನೆಗೆ ಕಚ್ಚಾ ಬಾಂಬ್ ಎಸೆದಿರುವುದು ಬೆಳಕಿಗೆ ಬಂದಿದೆ. ಒಂದು ವಾರದಲ್ಲಿ ಬಿಜೆಪಿ ಸಂಸದರ ಮನೆಯ ಹೊರಗೆ ನಡೆದ ಎರಡನೇ ದಾಳಿ ಇದಾಗಿದೆ. ಮೊದಲನೇ ಘಟನೆಯಲ್ಲಿ ಸೆಪ್ಟೆಂಬರ್ 8 ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಅವರ ಮನೆಯ ಮೇಲೆ ಕಚ್ಚಾ ಬಾಂಬ್ ಎಸೆಯಲಾಗಿತ್ತು.
ಇದು ಯೋಜಿತ ದಾಳಿಯೇ ಹೊರತು ಬೇರೇನೂ ಅಲ್ಲ. ಟಿಎಂಸಿ ಇದರ ಹಿಂದೆ ಇದೆ… ಅವರು ನನ್ನನ್ನು ಮತ್ತು ನನ್ನ ಜನರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಇದು ಬಂಗಾಳದಲ್ಲಿ ಗೂಂಡಾರಾಜ್ ಎಂದು ಅರ್ಜುನ್ ಸಿಂಗ್ ಆರೋಪಿಸಿದ್ದರು. ಭಬಾನಿಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ವೀಕ್ಷಕರಾಗಿ ನೇಮಕಗೊಂಡಿರುವ ಕಾರಣದಿಂದ ತನ್ನ ತಂದೆಯನ್ನು ಆಡಳಿತ ಪಕ್ಷವು ಗುರಿಯಾಗಿಸುತ್ತಿದೆ ಎಂದು ಬಿಜೆಪಿ ಶಾಸಕ ಮತ್ತು ಅರ್ಜುನ್ ಸಿಂಗ್ ಅವರ ಪುತ್ರ ಪವನ್ ಸಿಂಗ್ ಆರೋಪಿಸಿದ್ದರು.
ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಖರ್ ಕೂಡ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆ ಎತ್ತಿದ್ದರು. ಬಿಜೆಪಿ ಸಂಸದರ ಮನೆ ಮುಂದೆ ಬಾಂಬ್ ದಾಳಿ ನಡೆದಿರುವುದು ಇದೇ ಮೊದಲಲ್ಲ ಎಂದು ಜಗದೀಪ್ ಧಂಖರ್ ಹೇಳಿದ್ದರು.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಕೇಜ್ರಿವಾಲ್ ನಿವಾಸದ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದ ಪೊಲೀಸರು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement