ಬ್ರಿಟನ್, ರಷ್ಯಾದಲ್ಲಿನ ಕೊರೊನಾ ಸೋಂಕು ಹೊಸ ತಳಿ ಪತ್ತೆ: ಮುನ್ನೆಚ್ಚರಿಕೆ ಕ್ರಮ, ಮಾರ್ಗಸೂಚಿಗಳ ಬಗ್ಗೆ ತಜ್ಞರ ಜತೆ ಚರ್ಚೆ

ಹುಬ್ಬಳ್ಳಿ: ಬ್ರಿಟನ್, ರಷ್ಯಾ ಸೇರಿದಂತೆ ಭಾರತದಲ್ಲೂ ಕೊರೊನಾ ವೈರಸ್‌ನ ಹೊಸ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ತಜ್ಞರ ಜತೆ ಚರ್ಚಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಹಾನಗಲ್ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್‌ನ ಎವೈ ೪.೨ ತಳಿ ರಷ್ಯಾ ಹಾಗೂ ಬ್ರಿಟನ್‌ನಲ್ಲಿ ಪತ್ತೆಯಾಗಿದೆ. ಇದರ ಬಗ್ಗೆ ಅಧ್ಯಯನಗಳು ನಡೆಯುತ್ತಿವೆ. ಆದರೂ ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಜ್ಞರ ಜತೆ ಚರ್ಚಿಸಲಿದೆ ಎಂದರು.
ರಾಜ್ಯದಲ್ಲಿ ೨ ಕೊರೊನಾ ವೈರಸ್‌ನ ಹೊಸ ತಳಿಗಳು ಇರಬಹುದು ಎಂಬ ಅನುಮಾನಗಳಿದ್ದು, ಇದನ್ನು ಈಗ ಜಿನೋಮಿಕ್ಸ್ ಸ್ವೀಕೆನ್ಸ್ ಪರೀಕ್ಷೆಗೆ ಕಳುಹಿಸಲಾಗಿದೆ. ಈ ವರದಿ ಬಂದ ನಂತರ ಇದು ದೃಢಪಡಲಿದೆ ಎಂದರು.
ರಾಜ್ಯದ ೬-೭ ಕಡೆ ಜಿನೋಮೆಕ್ಸ್ ಸ್ವೀಕೆನ್ಸ್ ಲ್ಯಾಬ್‌ಗಳನ್ನು ಸ್ಥಾಪಿಸಿದ್ದೇವೆ. ಹೊಸ ತಳಿಯ ಬಗ್ಗೆ ವೈದ್ಯರು ಹಾಗೂ ತಜ್ಞರ ಜತೆ ಆಗಾಗ್ಗೆ ಚರ್ಚಿಸುತ್ತಿದ್ದೇವೆ. ಎವೈ೪.೨ ತಳಿಯ ಬಗ್ಗೆ ಚರ್ಚೆ ನಡೆಸಿ, ಈ ಹೊಸ ತಳಿ ದುಷ್ಪರಿಣಾಮ ಬೀರುತ್ತದೆಯೋ ಇಲ್ಲವೋ ಎಂಬ ಬಗ್ಗೆ ಮಾಹಿತಿ ಪಡೆದು ಮುಖ್ಯಮಂತ್ರಿಗಳೊಂದಿಗ ಚರ್ಚಿಸಿ ಎಲ್ಲದರ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು
ಬ್ರಿಟನ್, ರಷ್ಯಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ೩ನೇ ಅಲೆ ಕಾಣಿಸಿಕೊಂಡಿದೆ. ರಾಜ್ಯದಲ್ಲೂ ಮೂರನೇ ಅಲೆ ಬರುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಎರಡು ಡೋಸ್ ಲಸಿಕೆ ತೆಗೆದುಕೊಂಡಿರುವುದರಿಂದ ತೀವ್ರತರ ಪರಿಣಾಮಗಳು, ಅಪಾಯಗಳು ಕಡಿಮೆಯಾಗುತ್ತವೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಮಾರ್ಗಸೂಚಿಗಳನ್ನು ಪಾಲಿಸಿ ಲಸಿಕೆ ಹಾಕಿಸಿಕೊಂಡರೆ ಮೂರನೇ ಅಲೆಯನ್ನು ತಡೆಯಬಹುದಾಗಿದೆ. ೩ನೇ ಅಲೆ ಬಂದರೂ ಅದನ್ನು ಯಾವ ರೀತಿ ಎದುರಿಸಬೇಕು ಎಂಬುದಕ್ಕೆ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್​ ಮುಖಂಡನಿಗೆ ಕಪಾಳಕ್ಕೆ ಹೊಡೆದ ಡಿಸಿಎಂ ಡಿ.ಕೆ.ಶಿವಕುಮಾರ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement