ಕರ್ನಾಟಕದ 11 ಜಿಲ್ಲೆಗಳಲ್ಲಿ ಅಕ್ಟೋಬರ್ 31ರ ವರೆಗೆ ಹೆಚ್ಚು ಮಳೆ:ಮುನ್ಸೂಚನೆ

ಬೆಂಗಳೂರು: ಕರ್ನಾಟಕದ 11 ಜಿಲ್ಲೆಗಳಲ್ಲಿ ಅಕ್ಟೋಬರ್ 31ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹೇಳಲಾಗಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮುಂದಿನ 24 ಗಂಟೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದೆ ಎಂದು ಹೇಳಲಾಗಿದೆ.
ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯಲ್ಲೊ ಒಣಹವೆ ಇರಲಿದೆ ಎಂದು ತಿಳಿಸಲಾಗಿದೆ.
ರಾಜ್ಯಕ್ಕೆ ಅಕ್ಟೋಬರ್‌ 27ರಿಂದ ಈಶಾನ್ಯ ಮಾರುತಗಳು ಪ್ರವೇಶವಾಗಲಿದ್ದು, ಹಿಂಗಾರು ಮಳೆ ಸುರಿಯಲಿದೆ. ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಗೆ ಕಾರಣವಾಗಲಿವೆ.
ಅ.27ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹೆಚ್ಚು ಮಳೆಯಾಗಲಿದ್ದು , ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯ ಕೆಲವು ಭಾಗದಲ್ಲಿ ಹೆಚ್ಚು ಮಳೆ ಬೀಳಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಅರಬ್ಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ಮತ್ತು ಮುಂಗಾರು ಮಾರುತದ ಇರುವಿಕೆ ರಾಜ್ಯ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಗೆ ಕಾರಣವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕೇರಳದಲ್ಲಿ ಮತ್ತೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement