ಕುಮಟಾ ಪಾಲಿಟೆಕ್ನಿಕ್‌ ಕಾಲೇಜ್‌ ಹಿಂಭಾಗದಲ್ಲಿ ಬಾಂಬ್‌ ಮಾದರಿ ವಸ್ತು ಪತ್ತೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ವಿದ್ಯಾಧಿರಾಜ ಪಾಲಿಟೆಕ್ನಿಕ್ ಕಾಲೇಜಿನ ಹಿಂಭಾಗದಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾಲೇಜಿನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ.
ಸಂಜೆಯ ವಾಯು ವಿಹಾರಕ್ಕೆ ಬಂದಿರುವ ಕೆಲವು ಜನರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದು ನೋಡಲು ಬಾಂಬಿಗೆ ಇರುವ ಮಾದರಿಯಲ್ಲಿ ತಂತಿ ಜೋಡಿಸಲ್ಪಟ್ಪಿದೆ ಎಂದು ತಿಳಿದು ಬಂದಿದೆ. ಈ ಸುದ್ದಿ ಹರಡುತ್ತಿದ್ದಂತೆ ಕುಮಟಾದ ಜನರಲ್ಲಿ ಆತಂಕ ಮನೆಮಾಡಿದೆ.
ಅಗ್ನಿಶಾಮಕ ದಳ, ಶ್ವಾನದಳ ಸ್ಥಳಕ್ಕೆ ಆಗಮಿಸಿದೆ. ವಾಯು ವಿವಾಹರಕ್ಕೆ ಬಂದವರಿಗೆ ಬಾಂಬ್‌ ಮಾದರಿ ವಸ್ತು ವನ್ನು ಮೊದಲು ಗಮನಿಸಿದ್ದು, ಅವರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು ಅಪರಿಚಿತ ಜನರ ವಿಚಾರಣೆ ನಡೆಸಲಾಗುತ್ತಿದೆ.
ಜಿಲ್ಲಾ ಪೊಲೀಸ್ ವರಿಷ್ಠರು ಕುಮಟಾಕ್ಕೆ ಭೇಟಿ ನೀಡಿದ್ದು, ಪೊಲೀಸರಿಗೂ ಈ ಬಾಂಬ್‌ ಮಾದರಿ ವಸ್ತುವಿನ ಮೇಲೆ ಅನುಮಾನ ಬಂದಿದ್ದು ಮಂಗಳೂರಿನ ಬಾಂಬ್ ನಿಷ್ಕ್ರಿಯ ದಳದವರಿಗೆ ಮಾಹಿತಿ ನೀಡಿದ್ದಾರೆ. ಸಿಕ್ಕ ವಸ್ತು ನಿಜವಾದ ಬಾಂಬ್ ಹೌದೋ ಎನ್ನುವ ಕುರಿತು ಪರೀಕ್ಷೆ ನಡೆಸಲು ಮಂಗಳೂರಿನಿಂದ ತಜ್ಞರ ತಂಡ ಬರುತ್ತಿದೆ ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement