ತಮಿಳುನಾಡಿನ ಶಂಕರಪುರಂ ಪಟಾಕಿ ಅಂಗಡಿ ದುರಂತದಲ್ಲಿ ಐವರು ಸಜೀವ ದಹನ, ಹತ್ತು ಜನರಿಗೆ ಗಾಯ

ಕಲ್ಲಕುರಿಚಿ:: ಕಲ್ಲಕುರಿಚಿ ಜಿಲ್ಲೆಯ ಶಂಕರಪುರಂ ಪಟ್ಟಣದ ಪಟಾಕಿ ಅಂಗಡಿಯಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಐವರು ಮೃತಪಟ್ಟಿದ್ದಾರೆ ಮತ್ತು ಹತ್ತು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸತ್ತವರ ಸಂಖ್ಯೆ ಇನ್ನೂ ಹೆಚ್ಚಾಗಿರುವ ಸಾಧ್ಯತೆಯೂ ಇದೆ
ಶಂಕರಪುರಂ ಮತ್ತು ಕಲ್ಲಕುರಿಚಿಯಿಂದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ, ಪಟಾಕಿಗಳ ಸ್ಫೋಟಕ್ಕೆ ಕಾರಣವಾದ ಹಠಾತ್ ಸ್ಫೋಟವು ಪಟ್ಟಣದಲ್ಲಿ ಭೀತಿಯನ್ನು ಉಂಟುಮಾಡಿದೆ.
ಬೆಂಕಿ ಅಕ್ಕಪಕ್ಕದ ಅಂಗಡಿಗಳಿಗೆ ಆವರಿಸಿದೆ. ಅಂಗಡಿಗಳಲ್ಲಿದ್ದ ಎಲ್‌ಪಿಜಿ ಸಿಲಿಂಡರ್‌ಗಳು ಸಿಡಿದು ಬೆಂಕಿ ಹೊತ್ತಿಕೊಂಡಿವೆ. ದೀಪಾವಳಿ ಹಿನ್ನೆಲೆಯಲ್ಲಿ ಹಬ್ಬದ ಖರೀದಿಗೆಂದು ಪಟಾಕಿ ಅಂಗಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಜನರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ತೀವ್ರ ಸುಟ್ಟಗಾಯಗಳಾಗಿರುವ 10ಕ್ಕೂ ಹೆಚ್ಚು ಜನರನ್ನು ಕಲ್ಲಕುರಿಚಿ ಸರ್ಕಾರಿ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ದೀಪಾವಳಿಗೆ ಮುಂಚಿತವಾಗಿ ಶಂಕರಪುರಂನಲ್ಲಿ ಸ್ಥಾಪಿಸಲಾದ ಪಟಾಕಿ ಅಂಗಡಿಯಲ್ಲಿ ಕನಿಷ್ಠ 5 ಜನರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ,” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಫೋಟದಲ್ಲಿ ಗಾಯಗೊಂಡಿರುವ ಐವರನ್ನು ಕಲ್ಲಕುರಿಚಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಹೆಚ್ಚಿನ ತನಿಖೆ ನಡೆಯುತ್ತಿದೆ.
ಘಟನೆ ಹಿನ್ನೆಲೆ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಂಭೀರ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ರಿಂದ ಪರಿಹಾರ ಘೋಷಣೆ ಮಾಡಲಾಗಿದೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement