ದೀಪಾವಳಿಯಲ್ಲಿ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ದೀಪಾವಳಿ ಹಬ್ಬದಂದು ಗೋಪೂಜೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ನವೆಂಬರ್ 5ರ ಬಲಿಪಾಡ್ಯಮಿ ಹಬ್ಬದ ದಿನ ದೇವಾಲಯಗಳಲ್ಲಿ 5.30ರಿಂದ 6.30ರ ತನಕ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸುವಂತೆ ಗೋಪೂಜೆ ನಡೆಸಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ಆದೇಶ ಹೊರಡಿಸಿದೆ.
ಹಿಂದೂ ಧರ್ಮದಲ್ಲಿ ಹಸುವಿಗೆ ತಾಯಿಯ ಸ್ಥಾನವನ್ನು ನೀಡಲಾಗಿದೆ. ಗೋಮಾತೆ ಎಂದು ಭಾವಿಸಿ ಪೂಜಿಸಲಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಪಟ್ಟಣ, ಮಹಾನಗರದ ಜನರು ಗೋಪೂಜೆ ಮರೆತುಬಿಡುತ್ತಿದ್ದಾರೆ. ಈ ಕಾರಣಕ್ಕಾಗಿ ಹಿಂದೂ ಧರ್ಮದ ಸಂಪ್ರದಾಯ/ ಪದ್ಧತಿಯನ್ನು ಮುಂದಿನ ಪೀಳಿಗೆಗೆ ಗೋವುಗಳ ಪೂಜೆಯನ್ನು ಪರಿಚಯಿಸಲು ಗೋಪೂಜೆ ನಡೆಸಲು ಸೂಚಿಸಲಾಗಿದೆ.
ವರ್ಷದಲ್ಲಿ ಒಂದು ದಿನವಾದರೂ ಗೋವುಗಳ ಪೂಜೆಯನ್ನು ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ದೇವಾಲಯಗಳಲ್ಲಿ/ ಸಂಸ್ಥೆಗಳಲ್ಲಿ ದೀಪಾವಳಿಯ ಮತ್ತು ಬಲಿಪಾಡ್ಯಮಿಯ ದಿನದಂದು ಕಡ್ಡಾಯವಾಗಿ ನಡೆಸಿ ಹಿಂದೂ ಧರ್ಮದ ಗೋಪೂಜಾ ವಿಧಿ-ವಿಧಾನಗಳನ್ನು ಸಂಪ್ರದಾಯಗಳನ್ನು ಉಳಿಸುವ ನಿಟ್ಟಿನಲ್ಲಿ ದೀಪಾವಳಿಯ/ ಬಲಿಪಾಡ್ಯಮಿ ಹಬ್ಬದ ದಿನದಂದು ಗೋಪೂಜೆ ನಡೆಸಿ ಜಾರಿಗೊಳಿಸುವುದು ಸೂಕ್ತ, ಶಾಸ್ತ್ರ ಸಮ್ಮತವೂ ಆಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ದೀಪಾವಳಿಯ/ ಬಲಿಪಾಡ್ಯಮಿ ದಿನದಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯ/ಸಂಸ್ಥೆಗಳಲ್ಲಿ ಗೋವುಗಳನ್ನು ಪೂಜಿಸುವ ವಿಚಾರವಾಗಿ, ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ, ದೇವಾಲಯಕ್ಕೆ ಕರೆತಂದು ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ, ಅಕ್ಕಿ ಬೆಲ್ಲ, ಬಾಳೆಹಣ್ಣು ಸಿಹಿ ತಿನಿಸು ನೀಡಿ ಧೂಪ ದೀಪಗಳಿಂದ ಪೂಜಿಸಿ ನಮಸ್ಕರಿಸುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement