ನಾಳೆ ಕೃಷಿ ತಜ್ಞರ ಜೊತೆ ಅಮಿತ್ ಶಾ ಭೇಟಿಯಾಗಲಿರುವ ಅಮರಿಂದರ್ ಸಿಂಗ್

ಚಂಡೀಗಢ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಚಳವಳಿಗೆ ಸಂಭವನೀಯ ಪರಿಹಾರಗಳ ಕುರಿತು ಚರ್ಚಿಸಲು ನಾಳೆ (ಗುರುವಾರ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.
ತಾವು ಕೆಲವು ಕೃಷಿ ತಜ್ಞರೊಂದಿಗೆ ನಾಳೆ ಬೆಳಗ್ಗೆ ಅಮಿತ್ ಶಾ ಅವರನ್ನು ಭೇಟಿ ಮಾಡುವುದಾಗಿ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.
ಕೃಷಿ ತಜ್ಞರು ಸೇರಿದಂತೆ ನನ್ನೊಂದಿಗೆ 25-30ಜನರು ಬರಲಿದ್ದಾರೆ ನಾನು ಪಂಜಾಬ್‌ನ ಮಾಜಿ ಮುಖ್ಯಮಂತ್ರಿಯಾಗಿರುವುದರಿಂದ ಮತ್ತು ಕೃಷಿಕನಾಗಿರುವುದರಿಂದ ರೈತರ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇನೆ. ಈ ನಿಟ್ಟಿನಲ್ಲಿ ನಾಳೆ ಮತ್ತೊಮ್ಮೆ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದೇನೆ ಎಂದು ಅಮರಿಂದರ್ ಸಿಂಗ್ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಇದು ಅಮರೀಂದರ್ ಸಿಂಗ್ ಹಾಗೂ ಅಮಿತ್ ಶಾ ಅವರ ಎರಡನೇ ಭೇಟಿಯಾಗಿದೆ.
ನಾನು ಈ ವಿಚಾರವಾಗಿ ಯಾವುದೇ ರೈತ ಮುಖಂಡರನ್ನು ಭೇಟಿ ಮಾಡಿಲ್ಲ ಎಂದು ಅಮರೀಂದರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್‌ ವಿಧಾನಸಭಾ ಚುನಾವಣೆಗೂ ಮುನ್ನ ಅಮರೀಂದರ್ ಸಿಂಗ್ ಅವರು ತಮ್ಮದೇ ಆದ ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಇಂದು ಘೋಷಿಸಿದ್ದು, ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಕುರಿತು ಸುಳಿವು ನೀಡಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ : ಚುನಾವಣಾ ಆಯೋಗದಿಂದ 8,889 ಕೋಟಿ ರೂ.ಮೌಲ್ಯದ ವಸ್ತುಗಳ ವಶ

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement