ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ದೀಪಾವಳಿ ಗಿಫ್ಟ್: ತುಟ್ಟಿಭತ್ಯೆ ಶೇ.24.50ಕ್ಕೆ ಹೆಚ್ಚಿಸಿ ಸರ್ಕಾರದಿಂದ ಆದೇಶ

ಬೆಂಗಳೂರು : ದೀಪಾವಳಿಗೂ ಮುನ್ನವೇ ಸರ್ಕಾರ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.21.50 ರಿಂದ ಶೇ.24.50 ಕ್ಕೆ ಪರಿಷ್ಕರಿಸಿದ್ದು, ಈ ಕುರಿತು ಆದೇಶ ಹೊರಡಿಸಿದೆ. ಜುಲೈ 1 2021ರಿಂದಲೇ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ.
2008ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರಕಾರಿ ನೌಕರರು ಜುಲೈ 1 2021ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ದರಗಳನ್ನು ಪ್ರಸ್ತುತ ಮೂಲಕ ವೇತನದ ಶೇಕಡಾ 21.50ರಿಂದ ಶೇ.24.50ಕ್ಕೆ ಪರಿಷ್ಕರಿಸಿ ಸರಕಾರ ಆದೇಶಿಸಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ( Finance Department ) ಸರ್ಕಾರದ ಉಪ ಕಾರ್ಯದರ್ಶಿ ಉಮಾ.ಕೆ ಅವರು ತುಟ್ಟಿಭತ್ಯೆಯ ( ( Dearness Allowance ) ದರಗಳ ಪರಿಷ್ಕರಣೆಯ ನಡವಳಿಯನ್ನು ಹೊರಡಿಸಿದ್ದು, 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಜುಲೈ 1, 2021ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.21.50 ರಿಂದ ಶೇ.24.50ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದಿದ್ದಾರೆ.

ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಪಡೆಯುತ್ತಿರುವಂತಹ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಈ ಆದೇಶ ಅನ್ವಯಿಸಲಿದೆ.
ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯ್ತಿಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್ ಚಾರ್ಟ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರುಗಳಿಗೆ ಈ ಆದೇಶ ಅನ್ವಯಿಸುತ್ತದೆ. ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಸರಕಾರಿ ನೌಕರರು, ಸರಕಾರದ ನಿವೃತ್ತಿ ವೇತನದಾರರು ಅಥವಾ ಕುಟುಂಬ ನಿವೃತ್ತಿ ವೇತನದಾರರು, ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು ಅಥವಾ ಕುಟುಂಬ ನಿವೃತ್ತಿ ವೇತನದಾರರಿಗೂ ತುಟ್ಟಿಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ.ಈ ಆದೇಶದ ಮೇರೆಗೆ ಲಭ್ಯವಿರುವ ತುಟ್ಟಿಭತ್ಯೆಯನ್ನು ನಗದಾಗಿ ಪಾವತಿ ಮಾಡುವುದು ಎಂದು ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement