ಕುಡಿದ ಅಮಲಿನಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಮೇಲೆ ಸ್ನೇಹಿತನಿಂದ ಅತ್ಯಾಚಾರ : ಆರೋಪಿ ಬಂಧನ

ಉಡುಪಿ : ಕುಡಿದ ಮತ್ತಲ್ಲಿ ತನ್ನ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಉಡುಪಿ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ದೆಹಲಿ ಮೂಲದ ಆರ್ಯನ್‌ ಚಂದಾವನಿ ಎಂಬಾತನೇ ಗೆಳೆತಿಯ ಮೇಲೆ ಅತ್ಯಾಚಾರವನ್ನು ಎಸಗಿದವನು ಎಂದು ಆರೋಪಿಸಲಾಗಿದೆ. ಇಂಜಿನಿಯರಿಂಗ್‌ ವಿದ್ಯಾರ್ಥಿನಿಯಾಗಿರುವ ಸ್ನೇಹಿತಯ ಮೇಲೆ ಉಡುಪಿಯ ಇಂದ್ರಾಳಿಯಲ್ಲಿರುವ ಫ್ಲ್ಯಾಟ್‌ನಲ್ಲಿ ಕುಡಿದ ಮತ್ತಿನಲ್ಲಿ ಅತ್ಯಾಚಾರವೆಸಗಿದ ಕುರಿತು ಸ್ನೇಹಿತೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಉಡುಪಿಯ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

0 / 5. 0

ಪ್ರಮುಖ ಸುದ್ದಿ :-   ದಾಂಡೇಲಿ : ಗಂಡ ಹೆಂಡತಿಯ ಜಗಳ ; ಕೋಪದಲ್ಲಿ ಮಗುವನ್ನೇ ಮೊಸಳೆಗಳಿರುವ ನಾಲೆಗೆ ಎಸೆದ ತಾಯಿ

ನಿಮ್ಮ ಕಾಮೆಂಟ್ ಬರೆಯಿರಿ

advertisement