ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ

ದಾವಣಗೆರೆ: ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಿಂದಲೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಗೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸುವ ಸಂಬಂಧಿಸಿದಂತೆ ಮದನಗೋಪಾಲ್ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚಿಸಲಾಗಿದೆ. ಟಾಸ್ಕ್ ಫೋರ್ಸ್‌ನಲ್ಲಿ ಶಿಕ್ಷಣ ತಜ್ಞರು, ಸ್ವಯಂ ಸೇವಾ ಸಂಸ್ಥೆಗಳು ಇರಲಿವೆ. ಪಠ್ಯ ಕ್ರಮ, ಶಿಕ್ಷಕರಿಗೆ ತರಬೇತಿ ಇತರೆ ವಿಷಯಗಳ ಬಗ್ಗೆ ಸಮಿತಿ ಚರ್ಚಿಸಲಿದೆ. ಕೇಂದ್ರ ಸರ್ಕಾರ ಸಹ ಪ್ರಾಥಮಿಕ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಗೆ ಒಲವು ಹೊಂದಿದೆ. ರಾಜ್ಯದಲ್ಲೂ ಪ್ರಾಥಮಿಕ ಹಂತದಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಸಲಾಗುವುದು ಎಂದರು.
ಒಂದು ಶಾಲೆಯಲ್ಲಿ ಮೂವತ್ತೊಂದು ಮಕ್ಕಳಲ್ಲಿ ಕೊರೊನಾದ ಪ್ರಾಥಮಿಕ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಆ ಶಾಲೆಯನ್ನು ಮೂರು ದಿನ ಮುಚ್ಚಲಾಗಿದೆ. ಸ್ಯಾನಿಟೈಸ್ ಸೇರಿದಂತೆ ಮುಂಜಾಗ್ರತಾ ಕ್ರಮಗಳ ನಂತರ ಶಾಲೆಯನ್ನು ಪುನರಾರಂಭ ಮಾಡಲಾಗುವುದು ಎಂದು ತಿಳಿಸಿದರು.
ಕೊರೊನಾದಿಂದ ಶಿಕ್ಷಣ ಕ್ಷೇತ್ರ ಅನುಭವಿಸಿದಷ್ಟು ತೊಂದರೆ ಇನ್ನು ಯಾವುದೇ ಕ್ಷೇತ್ರ ಅನುಭವಿಸಿಲ್ಲ. ಸದ್ಯಕ್ಕೆ ಪಠ್ಯಕ್ರಮ ಕಡಿತದ ಬಗ್ಗೆ ಚಿಂತನೆ ನಡೆಸಿಲ್ಲ. ಡಿಸೆಂಬರ್ ನಂತರ ಪರೀಕ್ಷೆ ದೃಷ್ಟಿಯಿಂದ ಪಠ್ಯ ಕ್ರಮ ಕಡಿತಗೊಳಿಸುವ ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement