ಹವಾಲಾ ಹಣ ಪ್ರಕರಣ: ಕೇರಳ ಎಡಪಕ್ಷದ ನಾಯಕನ ಪುತ್ರ ಬಿನೇಶ್‌ ಕೊಡಿಯೇರಿಗೆ ಜಾಮೀನು ಮಂಜೂರು

ಬೆಂಗಳೂರು: ಹವಾಲಾ ಹಣ ಪ್ರಕರಣದಲ್ಲಿ ಬಂಧಿತರಾಗಿದ್ದ ಕೇರಳದ ಸಿಪಿಐ (ಎಂ) ನಾಯಕ ಕೊಡಿಯೇರಿ ಬಾಲಕೃಷ್ಣನ್‌ ಪುತ್ರ ಹಾಗೂ ನಟ ಬಿನೇಶ್‌ ಕೊಡಿಯೇರಿಗೆ ಗುರುವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ನೀಡಿದೆ.
ನ್ಯಾಯಮೂರ್ತಿ ಎಂ. ಜಿ. ಉಮಾ ನೇತೃತ್ವದ ಏಕಸದಸ್ಯ ಪೀಠವು ಷರತ್ತುಗಳಿಗೆ ಒಳಪಟ್ಟು ಬಿನೇಶ್‌ ಮನವಿ ಪುರಸ್ಕರಿಸಲಾಗಿದೆ ಎಂದು ಹೇಳಿತು. ವಿಶೇಷ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿದ್ದ ಹಿನ್ನಲೆಯಲ್ಲಿ ಮಾರ್ಚ್‌ನಲ್ಲಿ ಬಿನೇಶ್‌ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು. ಅಕ್ಟೋಬರ್ 29, 2020ರಿಂದ ಬಿನೀಶ್ ಕಸ್ಟಡಿಯಲ್ಲಿದ್ದಾರೆ.
ಕಳೆದ ವರ್ಷದ ಆಗಸ್ಟ್‌ನಲ್ಲಿ ಬೆಂಗಳೂರಿನ ಮಾದವಸ್ತು ನಿಯಂತ್ರಣ ಸಂಸ್ಥೆಯ ಅಧಿಕಾರಿಗಳು 60 ಗ್ರಾಂ ಎಂಡಿಎಂಎ ಹೊಂದಿದ್ದ ಕಾರಣಕ್ಕೆ ಈ ಪೈಕಿ ಮೊಹಮ್ಮದ್‌ ಅನೂಪ್‌ನನ್ನು ಜಾರಿ ನಿರ್ದೇಶಾಲಯ ವಶಕ್ಕೆ ಪಡೆದಿತ್ತು. ಕಮ್ಮನಹಳ್ಳಿಯಲ್ಲಿ ಅನೂಪ್ ಆರಂಭಿಸಿದ ರೆಸ್ಟೋರೆಂಟ್ ಮೇಲೆ ಬಿನೀಶ್ 50 ಲಕ್ಷ ಹೂಡಿಕೆ ಮಾಡಿದ್ದಾರೆ ಎಂಬುದು ಈಗ ವಿಚಾರಣೆ ಹಂತದಲ್ಲಿದೆ.
ಬಿನೇಶ್‌ ಅವರು ಅನೂಪ್‌ ಪರಿಚಿತನಾಗಿದ್ದು, ರೆಸ್ಟೋರೆಂಟ್‌ ತೆರೆಯಲು ಹಣ ನೀಡಿದ್ದಾಗಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ವಿಚಾರಣೆಯ ಸಂದರ್ಭದಲ್ಲಿ ಹಲವು ಬ್ಯಾಂಕ್‌ ಖಾತೆಗಳು ಪತ್ತೆಯಾಗಿದ್ದು, ಕೆಲವು ಅನೂಪ್‌ ಹೆಸರಿನಲ್ಲೂ ಇದ್ದವು. ಇವುಗಳಿಗೆ ಬಿನೇಶ್‌ ಅವರು ಅಪಾರ ಪ್ರಮಾಣದ ಹಣವನ್ನು ವರ್ಗಾವಣೆ ಮಾಡಿದ್ದರು. ಇದು ಕ್ರಿಮಿನಲ್‌ ಚಟುವಟಿಕೆಗಳಿಗೆ ಕಾರಣವಾಗಿತ್ತು ಎಂದು ಆಪಾದಿಸಲಾಗಿದೆ.
ಕಾನೂನುಬಾಹಿರ ಹಣ ವರ್ಗಾವಣೆ ನಿಯಂತ್ರಣ ಕಾಯಿದೆಯ ಸೆಕ್ಷನ್‌ 3ರ ಅಡಿ ಬಿನೇಶ್‌ ಅಪರಾಧಿ ಎಂಬುದನ್ನು ಸಾಬೀತುಪಡಿಸುವ ಸಂಬಂಧ ಸಾಕ್ಷ್ಯ ಸಂಗ್ರಹಿಸುವ ನಿಟ್ಟಿನಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ಜಾರಿ ನಿರ್ದೇಶನಾಲಯ ವಾದಿಸಿತ್ತು. ಆನಂತರ, ಬಂಧನಕ್ಕೆ ಒಳಗಾಗಿದ್ದ ಬಿನೇಶ್‌ ಅವರು ಸುಮಾರು ಒಂದು ವರ್ಷದಿಂದ ಜೈಲಿನಲ್ಲಿದ್ದರು.

ಪ್ರಮುಖ ಸುದ್ದಿ :-   'ಅನುಮಾನ ಆಧರಿಸಿ ಇವಿಎಂ ವಿರುದ್ಧ ನಿರ್ದೇಶನ ನೀಡಲು ಸಾಧ್ಯವೇ? : ಸುಪ್ರೀಂ ಕೋರ್ಟ್ ಪ್ರಶ್ನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement