ಕುಮಟಾ: ಉಪ್ಪಿನಪಟ್ಟಣದ ಕೆರೆ ಹೂಳಿನಲ್ಲಿ ಸಿಲುಕಿಕೊಂಡಿದ್ದ ಕಡವೆ ರಕ್ಷಣೆ, ವೀಕ್ಷಿಸಿ

posted in: ರಾಜ್ಯ | 0

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಉಪ್ಪಿನಪಟ್ಟಣದ ಕೆರೆಯ ಕೆಸರಲ್ಲಿ ಸಿಲುಕಿಕೊಂಡು ಒದ್ದಾಡುತ್ತಿದ್ದ ಕಡವೆಯೊಂದನ್ನು ಅರಣ್ಯ ‌ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಸುಮಾರು ನಾಲ್ಕು ವರ್ಷದ ಕಡವೆ ಇದಾಗಿದ್ದು ಕಾಡಿನಿಂದ ತೋಟಕ್ಕೆ ಬಂದು ನೀರಿನ ದಾಹ ತೀರಿಸಿಕೊಳ್ಳಲು ಕೆರೆಗೆ ಇಳಿದಿತ್ತು .ಆದರೆ ಕೆರೆಯಲ್ಲಿ ಹೂಳು ತುಂಬಿದ್ದರಿಂದ ಕೆಸರಲ್ಲಿ ಸಿಲುಕಿ ಮೇಲೆ ಬರಲಾಗದೆ ದಿನವಿಡೀ ಒದ್ದಾಡಿದೆ.

ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಕತಗಾಲ ವಲಯ ಅರಣ್ಯಾಧಿಕಾರಿ ದೀಪಕ ನಾಯ್ಕ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಡವೆಯನ್ನು ರಕ್ಷಿಸಲಾಯಿತು. ಈಗ ಅದನ್ನು ಮರಳಿ ಕಾಡಿಗೆ ಬಿಡಲಾಗಿದೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಇನ್ಫೋಸಿಸ್ ಮುಖ್ಯಸ್ಥರಾಗಿ ಮುಂದಿನ 5 ವರ್ಷಗಳ ವರೆಗೆ ಸಲೀಲ್ ಪರೇಖ್ ಮರುನೇಮಕ
advertisement

ನಿಮ್ಮ ಕಾಮೆಂಟ್ ಬರೆಯಿರಿ