ಆರ್‌ಬಿಐ ಗವರ್ನರ್‌ ಆಗಿ ಮತ್ತೆ ಮೂರು ವರ್ಷಗಳ ಅವಧಿಗೆ ಶಕ್ತಿಕಾಂತ ದಾಸ್ ಮರು ನೇಮಕ

ನವದೆಹಲಿ : ಭಾರತೀಯ ರಿಸರ್ವ್‌ ಬ್ಯಾಂಕಿನ (Reserve Bank of India) ಗವರ್ನರ್‌ ಆಗಿ ಶಕ್ತಿಕಾಂತ್‌ ದಾಸ್‌ ಅವರು ಮತ್ತೆ ಮೂರು ವರ್ಷಗಳ ಕಾಲ ಮುಂದುವರಿಯಲಿದ್ದಾರೆ.
ಕೇಂದ್ರ ಸರ್ಕಾರ ಅವರನ್ನು ಮತ್ತೆ ಮೂರು ವರ್ಷಗಳ ಅವಧಿಗೆ ಮರು ನೇಮಕ ಮಾಡಿದೆ. ಈಗ ಅವರು ಆರ್‌ಬಿಐ (RBI)ನ 25 ನೇ ಗವರ್ನರ್ ಮತ್ತೆ ಅಧಿಕಾರ ವಹಿಸಿಕೊಂಡಿದ್ದಾರೆ. ಶಕ್ತಿಕಾಂತ ದಾಸ್ ಅವರು ಡಿಸೆಂಬರ್ 11, 2018 ರಂದು ಮೂರು ವರ್ಷಗಳ ಅವಧಿಗೆ ನೇಮಕವಾಗಿದ್ದರು. ಅವರ ಅಧಿಕಾರ ಅವಧಿ ಮುಗಿತ್ತ ಬಂದಿತ್ತು.
ಡಿಸೆಂಬರ್‌ 10ರ ನಂತರ ಮೂರು ವರ್ಷಗಳ ಅವಧಿಗೆ ಶಕ್ತಿಕಾಂತ್‌ ದಾಸ್‌ ಅವರನ್ನು ನೇಮಕ ಮಾಡುವ ಕುರಿತು ಸಂಪುಟ ನೇಮಕಾತಿ ಸಮಿತಿ ಅನುಮೋದನೆಯನ್ನು ನೀಡಿದೆ. ಗುರುವಾರ ರಾತ್ರಿ ನಡೆದ ಸಂಪುಟದ ನೇಮಕಾತಿ ಸಮಿತಿ ಈ ನಿರ್ಧಾರಕ್ಕೆ ಅನುಮೋದನೆ ನೀಡಲಾಗಿದೆ. ದಾಸ್ ಅವರು ಈ ಹಿಂದೆ ಹಣಕಾಸು ಸಚಿವಾಲಯದಲ್ಲಿ ಆರ್ಥಿಕ ವ್ಯವಹಾರ ಗಳ ಇಲಾಖೆಯ ಕಾರ್ಯದರ್ಶಿಯಾಗಿ ಶಕ್ತಿಕಾಂತ ದಾಸ್‌ ಡಿಸೆಂಬರ್ 11, 2018 ರಂದು ಮೂರು ವರ್ಷಗಳ ಅವಧಿಗೆ ಕೇಂದ್ರೀಯ ಬ್ಯಾಂಕ್‌ನ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು.
ಶಕ್ತಿಕಾಂತ ದಾಸ್ ಅವರು ಹಣಕಾಸು, ತೆರಿಗೆ, ಕೈಗಾರಿಕೆಗಳು, ಮೂಲಸೌಕರ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.
ಭಾರತ ಸರ್ಕಾರದ ಹಣಕಾಸು ಸಚಿವಾಲಯದಲ್ಲಿ 8 ಕೇಂದ್ರ ಬಜೆಟ್‌ಗಳ ತಯಾರಿಯಲ್ಲಿ ನೇರವಾಗಿ ಸಂಬಂಧ ಹೊಂದಿದ್ದರು. ದಾಸ್ ಅವರು ವಿಶ್ವ ಬ್ಯಾಂಕ್, ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ), ನ್ಯೂ ಡೆವಲಪ್‌ಮೆಂಟ್ ಬ್ಯಾಂಕ್ (ಎನ್‌ಡಿಬಿ) ಮತ್ತು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಬ್ಯಾಂಕ್ (ಎಐಐಬಿ) ಗಳಲ್ಲಿ ಭಾರತದ ಪರ್ಯಾಯ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement