ಕಂಠೀರವ ಸ್ಟುಡಿಯೋದಲ್ಲಿ ಅಪ್ಪ-ಅಮ್ಮನ ಸಮಾಧಿ ಪಕ್ಕದಲ್ಲೇ ಭಾನುವಾರ ಪುನೀತ್ ರಾಜ​ಕುಮಾರ್ ಅಂತ್ಯಕ್ರಿಯೆ

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್​ಕುಮಾರ್ ಮತ್ತು ಪಾರ್ವತಮ್ಮ ರಾಜ್​ಕುಮಾರ್ ಅವರ ಸಮಾಧಿಯ ಪಕ್ಕದಲ್ಲೇ ಭಾನುವಾರ ಪುನೀತ್ ರಾಜ್​ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಪುನೀತ್ ರಾಜ್​ಕುಮಾರ್ ಮಗಳು ಅಮೆರಿಕದಿಂದ ಆಗಮಿಸಬೇಕಿರುವಕಾರಣ ಭಾನುವಾರ ಅಂತ್ಯಕ್ರಿಯೆ ನಡೆಯಲಿದೆ.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಪುನೀತ್ ರಾಜ್​ಕುಮಾರ್​ಗೆ ಸಕಲ ಸರ್ಕಾರಿ​ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅವರ ತಂದೆ-ತಾಯಿಯಾದ ಡಾ. ರಾಜ್ ಕುಮಾರ್ ಹಾಗೂ, ಪಾರ್ವತಮ್ಮನವರ ಸಮಾಧಿ ಪಕ್ಕದಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಹೃದಯಾಘಾತದಿಂದ ನಿಧನರಾಗಿರುವ ಪವರ್​ಸ್ಟಾರ್​ ಪುನೀತ್ ರಾಜ್​ಕುಮಾರ್ ಅಂತಿಮ ದರ್ಶನಕ್ಕೆ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಲಾಗಿದೆ. ಶನಿವಾರ ಪೂರ್ತಿ ಪುನೀತ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶವಿರಲಿದೆ.
ಈ ಮೊದಲು ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಬಳಿಯ ಪುನೀತ್ ಫಾರ್ಮ್​ಹೌಸ್​ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗಿತ್ತು. ಪುನೀತ್ ರಾಜ್​ಕುಮಾರ್ ಈ ಜಾಗದಲ್ಲಿ ಡಾ. ರಾಜಕುಮಾರ್ ಶಾಲೆ ಆರಂಭಿಸಬೇಕೆಂಬ ಕನಸು ಕಂಡಿದ್ದರು. ಹೀಗಾಗಿ ಈ ಫಾರ್ಮ್​ಹೌಸಿನ ಬದಲು ಕಂಠೀರವ ಸ್ಟುಡಿಯೋದಲ್ಲಿ ಅಪ್ಪ-ಅಮ್ಮನ ಸಮಾಧಿ ಪಕ್ಕದಲ್ಲೇ ಅಪ್ಪು ಅಂತ್ಯಕ್ರಿಯೆ ನಡೆಯಲಿದೆ.

ಪ್ರಮುಖ ಸುದ್ದಿ :-   ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement