ಕನ್ನಡದ ಪವರ್‌ ಸ್ಟಾರ್‌ ಪುನೀತ ರಾಜಕುಮಾರ ಇನ್ನಿಲ್ಲ..ತೀವ್ರ ಹೃದಯಾಘಾತದಿಂದ ನಿಧನ

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‌ಕುಮಾರ್‌  (46) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಮಧ್ಯಾಹ್ನ11:30ಕ್ಕೆ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಅವರಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗಿತ್ತಿದ್ದು, ಅವರನ್ನು ಉಳಿಸಿಕೊಳ್ಳಲು ಮಾಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದರು.
ಇಂದು ಬೆಳಿಗ್ಗೆ ಜಿಮ್‌ ಮಾಡುವ ವೇಳೆ ಪುನೀತ್ ರಾಜ್‍ಕುಮಾರ್ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು ಮೊದಲು ಅವರನ್ನು ರಮಣಶ್ರೀ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೃದಯಾಘಾತವಾಗಿದ್ದರಿಂದ ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆಸ್ಪತ್ರೆಯ ಹೆಲ್ತ್‌ ಬುಲೆಟಿನ್‌ ನಲ್ಲಿ ಅವರ ಆರೋಗ್ಯ ಗಂಭೀರವಾಗಿದೆ ಏನೂ ಹೇಳಲಉ ಸಾಧ್ಯವಿಲ್ಲ ಎಂದು ವೈದ್ಯರು ಮಾಧ್ಯಮಕ್ಕೆ ತಿಳಿಸಿದ್ದರು. ಅವರ ಸಹೋದರರು ಹಾಗೂ ನಟರಾದ ಶಿವರಾಜಕುಮಾರ, ರಾಘವೇಂದ್ರ ರಾಜಕುಮಾರ, ನಟ ರವಿಚಂದ್ರನ್‌, ನಟಿ ಶ್ರುತಿ ಮೊದಲಾದವರು ಆಸ್ಪತ್ರೆಗೆ ಆಗಮಿಸಿದ್ದರು,. ಮಾಹಿತಿ ತಿಳಿದ ತಕ್ಷಣವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಆರ್‌.ಅಶೋಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮೊದಲಾದವರು ಆಸ್ಪತ್ರೆಗೆ ದೌಡಾಯಿಸಿದ್ದರು. ಅವರ ಅಭಿಮಾನಿಗಳು ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿದ್ದರು. ಭಜರಂಗಿ-2 ಚಿತ್ರ ವೀಕ್ಷಿಸುತ್ತಿದ್ದ ನಿವೇದಿತಾ ಅರ್ಧಕ್ಕೇ ಬಿಟ್ಟು ಆಸ್ಪತ್ರೆಗೆ ಬಂದಿದ್ದರು. ಚಲನಚಿತ್ರ ನಿರ್ಮಾಪಕರಾದ ಕೆ.ಪಿ. ಶ್ರೀಕಾಂತ್, ರಾಕ್‌ಲೈನ್ ವೆಂಕಟೇಶ್, ಜಯಣ್ಣ ಕಣ್ಣೀರಿಡುತ್ತಲೇ ಆಸ್ಪತ್ರೆಗೆ ಆಗಮಿಸಿದ್ದಾರೆ.ನಿರ್ದೇಶಕ ಗುರುದತ್ ಆಗಮಿಸಿದ್ದಾರೆ.  ಆಸ್ಪತ್ರೆ ಕಡೆಗೆ ಚಿತ್ರರಂಗದ ನಟ- ನಟಿಯರು ದೌಡಾಯಿಸುತ್ತಿದ್ದಾರೆ. ಆದರೆ ಎಲ್ಲರನ್ನೂ ಬಿಟ್ಟು ಈಗ ಅವರು ನಮ್ಮನ್ನಗಲಿದ್ದಾರೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ವಿಕ್ರಂ ಆಸ್ಪತ್ರೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್, ನಟರಾದ ಗಣೇಶ್, ಧ್ರುವ ಸರ್ಜಾ, ರವಿಚಂದ್ರನ್, ನೀನಾಸಂ ಸತೀಶ್, ಯೋಗರಾಜ್ ಭಟ್, ನಟಿಯರಾದ ಸುಧಾರಾಣಿ, ಶೃತಿ, ಜಯಮಾಲಾ, ಅನುಪ್ರಭಾಕರ್ ಸೇರಿದಂತೆ ಹಲವು ನಟ-ನಟಿಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಥಳಕ್ಕಾಗಮಿಸಿದ್ದು, ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ಡಾ. ರಾಜಕುಮಾಋ ಅವರ ಕೊನೆಯ ಮಗನಾಗಿದ್ದ ಪುನೀತರಾಜಕುಮಾರ ಅವರು ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಪುನೀತ್ ರಾಜ್ ಕುಮಾರ್ ಅವರು ಅಪ್ಪು ಚಿತ್ರದ ಮೂಲಕ ನಾಯಕನಟನಾಗಿದ್ದರು. ನಂತರ ಅಭಿ, ಆಕಾಶ್, ನಮ್ಮ ಬಸವ, ಜಾಕಿ, ಹುಡುಗರು, ರಾಜಕುಮಾರ ಮುಂತಾದ ಚಿತ್ರಗಳಲ್ಲಿ ಮಿಂಚಿದ್ದರು.

ಕನ್ನಡ ಚಿತ್ರರಂಗದಲ್ಲಿಯೇ ಅತ್ಯಂತ ಫಿಟ್ ಆಗಿದ್ದ ಪುನೀತ್ ರಾಜಕುಮಾರ್ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಪುನೀತ್ ರಾಜ್‌ಕುಮಾರ್ ಅವರು ದಿಗ್ಗಜ ನಟರಾದ ರಾಜ್‌ಕುಮಾರ್ ಮತ್ತು ಪಾರ್ವತಮ್ಮ ಅವರ ಪುತ್ರ. ಪುನೀತ್ ಅವರು ಬಾಲ ಕಲಾವಿದರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು 1985 ರಲ್ಲಿ ಬೆಟ್ಟದ ಹೂವು ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಬಾಲ ಕಲಾವಿದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದರು.  ಶಿವರಾಮ ಕಾರಂತರ ಕೃತಿ ಬೆಟ್ಟದ ಹೂವು ಸಿನೆಮಾದಲ್ಲಿ ಬಾಲ್ಯದಲ್ಲೇ  ಅದ್ಭುತವಾಗಿ ನಟಿಸಿದ್ದರು. ಬಾಲ್ಯದಲ್ಲಿ ಹಿನ್ನೆಲೆ ಗಾಯನದ ಮೂಲಕ ಜನಪ್ರಿಯರಾಗಿದ್ದರು.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ನಟ ಪುನೀತ್ ರಾಜಕುಮಾರ್ ಸಾವು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಅವರ ಲಕ್ಷಾಂತರ ಅಭಿಮಾನಿಗಳು ಈ ಸಾವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗುತ್ತಿದ್ದು, ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ.

ಪುನೀತ್ ರಾಜಕುಮಾರ್ ಜೇಮ್ಸ್ ಸಿನಿಮಾದ ಕೆಲಸಗಳತ್ತ ಗಮನ ಹರಿಸುತ್ತಿದ್ದರು. ಆ ಚಿತ್ರಕ್ಕೆ ಚೇತನ್‌ಕುಮಾರ್ ನಿರ್ದೇಶಕ. ಅಲ್ಲದೇ, ಪವನ್‌ಕುಮಾರ್ ನಿರ್ದೇಶನದ ‘ದ್ವಿತ್ವ’ ಚಿತ್ರದಲ್ಲೂ ಅಪ್ಪು ನಟಿಸುತ್ತಿದ್ದರು.

ಪುನೀತ್ ರಾಜ್‌ಕುಮಾರ್‌ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ. ಕಂಠೀರವ ಸ್ಟೇಡಿಯಮ್‌ಗೆ ಬೆಂಗಳೂರು ಜಿಲ್ಲಾಧಿಕಾರಿ ಮಂಜುನಾಥ್ ಭೇಟಿ ನೀಡಿದ್ದು, ಕ್ರೀಡಾಂಗಣ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.

ಯುವರತ್ನ’ ಪುನೀತ್ ಅವರ ಬಿಡುಗಡೆಯಾದ ಕೊನೆಯ ಚಿತ್ರ, ಜೇಮ್ಸ್ ಚಿತ್ರದ ಶೂಟಿಂಗ್ ಮುಗಿದಿದ್ದು, ಬಿಡುಗಡೆಯ ಸನಿಹದಲ್ಲಿದೆ.

 

 

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement