ಕರ್ನಾಟಕದ ಕರಾವಳಿ ಸೇರಿ 14 ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಮಳೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಅಂದರೆ ನವೆಂಬರ್‌ 1ರ ವರೆಗೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ನವೆಂಬರ್ 1ರವರೆಗೂ ಕರ್ನಾಟಕದಲ್ಲಿ ಮಳೆ ಬೀಳಲಿದೆ. ಅಕ್ಟೋಬರ್ 30ರಂದು ಕರ್ನಾಟಕಕ್ಕೆ ಹಿಂಗಾರು ಮಾರುತಗಳು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ನ. 1ರವರೆಗೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದ್ದು, ಕರಾವಳಿ ಹಾಗೂ ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ 14 ಜಿಲ್ಲೆಗಳಲ್ಲಿ ಅ. 30 ಮತ್ತು 31ರಂದು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಕೋಲಾರ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅ. 30 ಮತ್ತು 31ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಇನ್ನು 4 ದಿನ ಮಳೆ ಸುರಿಯಲಿದೆ. ಕರ್ನಾಟಕ, ಕೇರಳ, ತಮಿಳುನಾಡು, ಪುದುಚೆರಿ, ಆಂಧ್ರಪ್ರದೇಶದಲ್ಲಿ ಇಂದಿನಿಂದ ನವೆಂಬರ್ 1ರವರರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಕುಮಟಾ : ಬಾಡದಲ್ಲಿ ಚಿರತೆ ದಾಳಿಗೆ ಇಬ್ಬರಿಗೆ ಗಾಯ ; ಮನೆಯೊಳಗೆ ನುಗ್ಗಿ ಅವಿತುಕೊಂಡ ಚಿರತೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement