ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ಗೆ ಜಾಮೀನು ಸಿಕ್ಕರೂ ಇಂದು ಬಿಡುಗಡೆ ಇಲ್ಲ

ಮುಂಬೈ: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್​ ಖಾನ್​ ಅವರಿಗೆ ಗುರುವಾರ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ ಶುಕ್ರವಾರ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ಆರ್ಯನ್ ಖಾನ್ ಮತ್ತೊಂದು ರಾತ್ರಿ ಜೈಲಿನಲ್ಲಿಯೇ ಕಳೆಯಬೇಕಾಗಿದೆ.
ಆರ್ಥರ್ ರೋಡ್ ಜೈಲಿನ ಅಧಿಕಾರಿಗಳ ಪ್ರಕಾರ, ಆರ್ಯನ್ ಖಾನ್ ಅವರನ್ನು ಶನಿವಾರ ಬೆಳಗ್ಗೆ ಜೈಲಿನಿಂದ ಬಿಡುಗಡೆ ಮಾಡಲಾಗುತ್ತದೆ.
ಸಕಾಲಕ್ಕೆ ಪೇಪರುಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಇಂದು ಅವರನ್ನು ಬಿಡುಗಡೆ ಮಾಡುವುದಿಲ್ಲ’ ಜೈಲು ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಆರ್ಯನ್ ಖಾನ್ ಕಾನೂನು ತಂಡ, “ಸಂಜೆ 7 ಗಂಟೆ ವರೆಗೆ ಪೇಪರ್ ಗಳನ್ನು ಸ್ವೀಕರಿಸಿ ಬಿಡುಗಡೆ ಮಾಡಬಹುದು” ಎಂದು ಹೇಳಿದ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಈ ಸಮರ್ಥನೆ ನೀಡಿದ್ದಾರೆ.
ಬಿಡುಗಡೆಗಾಗಿ ಆರ್ಥರ್ ರೋಡ್ ಜೈಲಿನ ಹೊರಗಿನ ಜಾಮೀನು ಪೆಟ್ಟಿಗೆಯಲ್ಲಿ ಬಿಡುಗಡೆ ಆದೇಶದ ಭೌತಿಕ ಪ್ರತಿ ಹಾಕಬೇಕು. ಇದಕ್ಕಾಗಿ ಜೈಲು ಅಧಿಕಾರಿಗಳು ಸಂಜೆ 5.35 ರವರೆಗೆ ಕಾಯುತ್ತಾರೆ” ಎಂದು ಆರ್ಥರ್ ರೋಡ್ ಜೈಲು ಅಧೀಕ್ಷಕ ನಿತಿನ್ ವಾಯ್ಚಲ್ ಅವರು ಹೇಳಿದ್ದಾರೆ.
ಮಾದಕ ವಸ್ತುಗಳ ಬಳಕೆ, ಮಾರಾಟ ಸೇರಿದಂತೆ ಅನೇಕ ಆರೋಪಗಳನ್ನು ಆರ್ಯನ್ ಖಾನ್ ಮೇಲೆ ಎನ್ ಸಿ ಬಿ ಹೊರಿಸಿದೆ.

ಪ್ರಮುಖ ಸುದ್ದಿ :-   ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’...

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement