ದೇಶದಲ್ಲಿ ದಾಖಲೆ ಏರಿಕೆ ಕಂಡ ಪೆಟ್ರೋಲ್-ಡೀಸೆಲ್ ದರ

ಬೆಂಗಳೂರು: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಬೆಂಗಳೂರು ಸೇರಿದಂತೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರಿಗೆ ಮತ್ತೆ 35 ಪೈಸೆ ಏರಿಕೆಯಾಗಿದ್ದು, ಇದು ಪ್ರತಿ ಲೀಟರಿಗೆ ಈವರೆಗಿನ ದಾಖಲೆ ಪ್ರಮಾಣದ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರಿಗೆ 112.39 ರೂ.ಗಳಿಗೆ ಏರಿಕೆಯಾಗಿದ್ದರೆ ಡೀಸೆಲ್ ಪ್ರತಿ ಲೀಟರಿಗೆ 103.31ರೂ.ಗಳಿಗೆ ಏರಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.64 ರೂ.ಗಳಾದರೆ ಮುಂಬೈನಲ್ಲಿ 114.47ರೂ.ಗಳಿಗೆ ಏರಿಕೆಯಾಗಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ ಡೀಸೆಲ್ ಬೆಲೆ 105.49 ರೂ.ಗಳಿಗೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಡೀಸೆಲ್ ಬೆಲೆ 97.37ರೂ.ಗಳಿಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್‍ ದರ 109.12ರೂ.ಗಳಾದರೆ ಡೀಸೆಲ್ ದರ 100.49 ರೂ.ಗಳಾಗಿದೆ. ಚೆನ್ನೈನಲ್ಲಿ ಪೆಟ್ರೋಲ್ 105.43, ಡೀಸೆಲ್ 101.59 ರೂ.ಗಲಾಗಿದೆ. ದೇಶದ ಬಹುತೇಕ ನಗರಗಳಲ್ಲಿ ಈಗ ಡೀಸೆಲ್ ಬೆಲೆಯೂ 100ರೂ.ಗಳ ಗಡಿ ದಾಟಿದೆ.
ಈ ವಾರದಲ್ಲಿ ಸತತ ಮೂರನೆ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕಂಡಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement