ನ.30ರ ವರೆಗೆ ಕೋವಿಡ್ ನಿಯಂತ್ರಣ ಕ್ರಮ‌ ಮುಂದುವರಿಕೆ : ರಾಜ್ಯಗಳಿಗೆ ಕೇಂದ್ರದ ಪತ್ರ

ನವದೆಹಲಿ: ಕೆಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳು ದಾಖಲಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಕೋವಿಡ್‌–19 ಸೋಂಕು ನಿಯಂತ್ರಿಸಲು ಈಗ ಜಾರಿಯಲ್ಲಿರುವ ಮಾರ್ಗಸೂಚಿಗಳು ನವೆಂಬರ್ 30ರ ವರೆಗೆ ಮುಂದುವರಿಯಲಿವೆ ಎಂದು ತಿಳಿಸಿದೆ.
ಈ ಸಂಬಂಧ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ
ದೇಶದಲ್ಲಿ ದೈನಂದಿನ ಪ್ರಕರಣಗಳು ಮತ್ತು ಒಟ್ಟಾರೆ ರೋಗಿಗಳ ಸಂಖ್ಯೆ ಸ್ಥಿರವಾಗಿ ಕ್ಷೀಣಿಸುತ್ತಿದೆ. ಆದರೆ ಕೆಲವು ರಾಜ್ಯಗಳಲ್ಲಿ ಸ್ಥಳೀಯವಾಗಿ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳ ಹೆಚ್ಚಳ ಸಾಧ್ಯತೆ ತಡೆಗಟ್ಟಲು ಹಬ್ಬದ ಋತುವಿನಲ್ಲಿ ಕಾರ್ಯತಂತ್ರ ರೂಪಿಸಲಾಗಿದೆ. ಪರೀಕ್ಷೆ, ಪತ್ತೆ, ಚಿಕಿತ್ಸೆ, ಲಸಿಕೆ ಮತ್ತು ಕೋವಿಡ್ ನಿಯಮ ಈ ಐದು ಕಾರ್ಯತಂತ್ರಗಳಿಗೆ ಆದ್ಯತೆ ನೀಡಬೇಕಾಗಿದೆ. ಅರ್ಹರಿಗೆ ತಪ್ಪದೇ ಎರಡನೇ ಡೋಸ್ ಲಸಿಕೆ ನೀಡಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement