ಹೃದಯಾಘಾತದಿಂದ ನಟ ಪುನೀತ್​ ರಾಜ್​ಕುಮಾರ ನಿಧನ

ಬೆಂಗಳೂರು: ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‌ಕುಮಾರ್‌  (46) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಮಧ್ಯಾಹ್ನ11:30ಕ್ಕೆ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ ಸ್ಥಿತಿ ಗಂಭೀರವಾಗಿದೆ ಎಂದು ವಿಕ್ರಂ ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಅವರಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗಿತ್ತಿದ್ದು, ಅವರನ್ನು ಉಳಿಸಿಕೊಳ್ಳಲು ಮಾಡಲಾಗುತ್ತಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದರು.
ಇಂದು ಬೆಳಿಗ್ಗೆ ಜಿಮ್‌ ಮಾಡುವ ವೇಳೆ ಪುನೀತ್ ರಾಜ್‍ಕುಮಾರ್ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು ಮೊದಲು ಅವರನ್ನು ರಮಣಶ್ರೀ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೃದಯಾಘಾತವಾಗಿದ್ದರಿಂದ ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು.

ತಜ್ಞ ವೈದ್ಯರ ತಂಡ ಅಪ್ಪುಗೆ ಚಿಕಿತ್ಸೆ ಮುಂದುವರಿಸಿದ್ದಾರೆ.  ಆದರೆ ಸ್ಥಿತಿ ಬಹಳ ಗಂಭೀರವಾಗಿದೆ ಎಂದರು.
ಜಿಮ್‌ ಮಾಡುವ ವೇಳೆ ಪುನೀತ್ ರಾಜ್‍ಕುಮಾರ್ ತೀವ್ರ ಅಸ್ವಸ್ಥಗೊಂಡಿದ್ದು,ಅವರನ್ನು ಕೂಡಲೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೊದಲು ಅವರನ್ನು ರಮಣಶ್ರೀ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಆಸ್ಪತ್ರೆ ಸುತ್ತ ಬಿಗಿ ಬಂದೋ ಬಸ್ತ್‌ ಏರ್ಪಡಿಸಲಾಗಿದೆ. ಪುನೀತ್ ಅವರ ಆರೋಗ್ಯದ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ. ಆದರೆ ಕನ್ನಡ ಚಿತ್ರರಂಗದ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.ನಟ​​ ಪುನೀತ್​ ರಾಜ್​ಕುಮಾರ್​ ಆರೋಗ್ಯ ಗಂಭೀರ ಹಿನ್ನೆಲೆಯಲ್ಲಿ ಶಿವರಾಜ್​​ ಕುಮಾರ್​ ಪುತ್ರಿ ನಿವೇದಿತಾ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಭಜರಂಗಿ-2 ಚಿತ್ರ ವೀಕ್ಷಿಸುತ್ತಿದ್ದ ನಿವೇದಿತಾ, ಧೀರನ್ ಚಿತ್ರವೀಕ್ಷಣೆ ಅರ್ಧಕ್ಕೇ ಬಿಟ್ಟು ಆಸ್ಪತ್ರೆಗೆ ಬಂದಿದ್ದಾರೆ ಎಂದು ವರದಿಯಾಗಿದೆ. ನಟ ಹಾಗೂ ಹಿರಿಯ ಸಹೋದರ ಶಿವರಾಜಕುಮಾರ ಸಹ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯ ವೈದ್ಯರಿಂದ ನಟ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಮಾಹಿತಿ ಪಡೆಯುತ್ತಿದ್ದಾರೆ.

ನಟ ವಿ. ರವಿಚಂದ್ರನ್ ಕೂಡಾ ಆಸ್ಪತ್ರೆಗೆ ಆಗಮಿಸಿದ್ದು, ಚಲನಚಿತ್ರ ನಿರ್ಮಾಪಕರಾದ ಕೆ.ಪಿ. ಶ್ರೀಕಾಂತ್, ರಾಕ್‌ಲೈನ್ ವೆಂಕಟೇಶ್, ಜಯಣ್ಣ ಕಣ್ಣೀರಿಡುತ್ತಲೇ ಆಸ್ಪತ್ರೆಗೆ ಆಗಮಿಸಿದ್ದಾರೆ.ನಿರ್ದೇಶಕ ಗುರುದತ್ ಆಗಮಿಸಿದ್ದಾರೆ.  ಆಸ್ಪತ್ರೆ ಕಡೆಗೆ ಚಿತ್ರರಂಗದ ನಟ- ನಟಿಯರು ದೌಡಾಯಿಸುತ್ತಿದ್ದಾರೆ.

ಫಿಟ್ನೆಸ್​ ಬಗ್ಗೆ ಪುನೀತ್​ ಹೆಚ್ಚು ಗಮನ ನೀಡುತ್ತಾರೆ. ಪ್ರತಿದಿನ ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಾರೆ. ಆರೋಗ್ಯದ ಬಗ್ಗೆ ಅವರಿಗೆ ಕಾಳಜಿ ಇದೆ. ಹಾಗಿದ್ದರೂ ಕೂಡ ಅವರಿಗೆ ಏಕಾಏಕಿ ಅನಾರೋಗ್ಯ ಉಂಟಾಗಿರುವುದು ಅಭಿಮಾನಿಗಳನ್ನು ಚಿಂತೆಗೆ ಈಡುಮಾಡಿದೆ. ಪುನೀತ್​ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಆಸ್ಪತ್ರೆ ಬಿಡುಗಡೆ   ಹೆಲ್ತ್​ ಬುಲೆಟಿನ್​ಗಾಗಿ ನಿರೀಕ್ಷಿಸಲಾಗುತ್ತಿದೆ.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement