ಮೋದಿ ಸರ್‌ನೇಮ್‌ ಕುರಿತು ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಪ್ರಕರಣ: ರಾಹುಲ್‌ ಕೋರ್ಟ್‌ಗೆ ಹಾಜರ್‌

ನವದೆಹಲಿ: 2019ರ ಚುನಾವಣಾ ರ‍್ಯಾಲಿ ಸಂದರ್ಭದಲ್ಲಿ ಮೋದಿ ಸರ್​ನೇಮ್​ ಕುರಿತಾಗಿ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸೂರತ್​ನ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾದರು.
ರಾಹುಲ್​ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಇವರ ವಿರುದ್ಧ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ಮಾನನಷ್ಟ ಪ್ರಕರಣ ದಾಖಲು ಮಾಡಿದ್ದರು.
ಅರ್ಜಿಯ ವಿಚಾರಣೆ ನಡೆಸಿದ್ದ ಸೂರತ್​ನ ಮ್ಯಾಜಿಸ್ಟ್ರೇಟ್ ಕೋರ್ಟ್‌ ಮಾನಹಾನಿಗೆ ಸಂಬಂಧಿಸಿದಂತೆ ಕೋರ್ಟ್‌ ಮುಂದೆ ಖುದ್ದು ಹಾಜರಾತಿಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಶುಕ್ರವಾರ ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರು ಆಗಿದ್ದರು.
2019ರ ಲೋಕಸಭೆ ಚುನಾವಣೆ ವೇಳೆ ಭಾಷಣ ಮಾಡ್ತಿದ್ದ ರಾಹುಲ್ ಗಾಂಧಿ, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗದಿಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದರು.
ಇದರಿಂದ ಸಿಟ್ಟಿಗೆದ್ದಿದ್ದ ಪೂರ್ಣೇಶ್​ ಮೋದಿ ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ಮೂರನೆಯ ಬಾರಿ ಕೋರ್ಟ್‌ಗೆ ರಾಹುಲ್‌ ಗಾಂಧಿಗೆ ಹಾಜರಾಗಿದ್ದಾರೆ.

ಪ್ರಮುಖ ಸುದ್ದಿ :-   ಚಲಾವಣೆಯಾದ ಒಟ್ಟು ಮತದ ಮಾಹಿತಿ 48 ಗಂಟೆಗಳಲ್ಲಿ ಏಕೆ ವೆಬ್‌ಸೈಟ್‌ನಲ್ಲಿ ಹಾಕುತ್ತಿಲ್ಲ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಪ್ರಶ್ನೆ

 

 

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement