ಬೆಂಗಳೂರು: ಬೆಂಗಳೂರು: ನಟ ಪುನೀತ್ ರಾಜಕುಮಾರ ಅವರ ಅಂತ್ಯಕ್ರಿಯೆ ಇಂದಲ್ಲ, ನಾಳೆ, ಭಾನುವಾರ ಸಕಲ ಸರ್ಕಾರ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.
ಇಂದು ಸಂಜೆ ನಡೆಯಬೇಕಿದ್ದ ಪುನೀತ್ ರಾಜ್ಕುಮಾರ್ ಅವರ ಅಂತ್ಯಸಂಸ್ಕಾರ ನಾಳೆಗೆ ಮುಂದೂಡಲಾಗಿದೆ ಈ ವಿಷಯವನ್ನು ರಾಘವೇಂದ್ರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನಟ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ಇಚಾರದಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿ ಆಗಿದ್ದವು. ಇಂದು (ಅಕ್ಟೋಬರ್ 30) ಸಂಜೆಯೇ ಅವರ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿತ್ತು. ಆದರೆ, ಈಗ ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕೃತ ಘೋಷಣೆ ಮಾಡಿದ್ದು, ಭಾನುವಾರ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಪುನೀತ್ ಅಂತಿಮ ದರ್ಶನಕ್ಕೆ ಹೆಚ್ಚಿನ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಾಳೆ ಭಾನುವಾರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.
ವಿದೇಶದಲ್ಲಿರುವ ಪುನೀತ್ ರಾಜ್ಕುಮಾರ್ ಮಗಳು ಧೃತಿ ಆಗಮಿಸುವುದು ನಿರೀಕ್ಷೆಗಿಂತ ಹೆಚ್ಚು ತಡವಾಗಲಿದೆ ಎಂದು ಹೇಳಲಾಗುತ್ತಿದೆ. ಪುನೀತ್ ಅವರ ಮಗಳು ಧ್ರುತಿ ಸಂಜೆ ನಾಲ್ಕರ ಸುಮಾರಿಗೆ ಬೆಂಗಳೂರಿಗೆ ಬರಲಿದ್ದಾರೆ. ಅವರು ಬಂದು ಅಂತ್ಯಕ್ರಿಯೆ ನಡೆಲಿರುವ ಸ್ಥಳ ಸೇರಿಕೊಳ್ಳಲು ಇನ್ನೂ ಸಮಯ ತೆಗೆದುಕೊಳ್ಳುತ್ತದೆ. ರಾಜ್ ಕುಟುಂಬದಲ್ಲಿ ಕತ್ತಲಾದ ನಂತರ ಅಂತ್ಯಕ್ರಿಯೆ ನಡೆಯುವುದಿಲ್ಲ ಎಂದು ಹೇಳಿರುವ ರಾಘಣ್ಣ, ಧೃತಿ ಬಂದ ನಂತರ ಅಂತ್ಯಕ್ರಿಯೆಯ ಸಮಯದ ಕುರಿತಾಗಿ ಪ್ರಕಟಿಸಲಾಗುವುದು ಎಂದಿದ್ದಾರೆ.
ಅಲ್ಲದೆ, ಒಂದು ಕಡೆ ಪುನೀತ್ ಅವರ ಅಂತಿಮ ದರ್ಶನ ಪಡೆಯಲು ಬರುತ್ತಿರುವ ಅಭಿಮಾನಿಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಲೇ ಇದೆ. ಈ ಕಾರಣದಿಂದಾಗಿಯೇ ಮುಖ್ಯಮಂತ್ರಿಗಳು ಪುನೀತ್ ರಾಜ್ಕುಮಾರ್ ಅವರ ಕುಟುಂಬದವರ ಬಳಿ ಮಾತನಾಡಿ, ಅಂತ್ಯಕ್ರಿಯೆಯನ್ನು ಮುಂದೂಡಲು ಸಲಹೆ ನೀಡಿದರು ಎಂಬ ಮಾಹಿತಿ ಲಭ್ಯವಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ