ಕರ್ನಾಟಕ ಸರ್ಕಾರದಿಂದ ದೀಪಾವಳಿ ಮಾರ್ಗಸೂಚಿ ಬಿಡುಗಡೆ: ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ಇರುವ ಹಿನ್ನೆಲೆಯಲ್ಲಿ ದೀಪಾವಳಿಯನ್ನು ಸರಳವಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮದೊಂದಿಗೆ ಆಚರಿಸುವ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಸಂಬಂಧ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದು ಕೊರೊನಾ ಹಿನ್ನೆಲೆಯಲ್ಲಿ ಎಲ್ಲರೂ ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗಸೂಚಿಗಳನ್ನು ಪಾಲಿಸಿ ಹಬ್ಬವನ್ನು ಸರಳವಾಗಿ ಆಚರಿಸುವಂತೆ ಸೂಚಿಸಿದ್ದಾರೆ. ನವೆಂಬರ್ 1ರಿಂದ 10ರ ವರೆಗೆ ರಾಜ್ಯಾದ್ಯಂತ ಹಸಿರು ಪಟಾಕಿ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ.
ಪರವಾನಿಗೆ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗಿದ್ದು, ಸಾರ್ವಜನಿಕ ಪ್ರದೇಶ ದಿಂದ ದೂರವಿರುವ ಬಯಲು ಪ್ರದೇಶದಲ್ಲಿ ಹಸಿರು ಪಟಾಕಿ ಮಾರಾಟ ಮಾಡುವ ಮಳಿಗೆ ತೆರೆಯುವಂತೆ ಸೂಚನೆ ನೀಡಲಾಗಿದೆ.
ಮಳಿಗೆ ಆರಂಭಿಸುವ ಸಮಯದಲ್ಲಿ ಎರಡು ಕಡೆ ಗಾಳಿ ಓಡಾಡುವ ವ್ಯವಸ್ಥೆ ಇರಬೇಕು ಒಂದು ಮಳಿಗೆಯಿಂದ ಮತ್ತೊಂದು ಮಳಿಗೆಗೆ ಆರು ಮೀಟರ್ ಅಂತರ ಇರಬೇಕು ಎಂದು ಷರತ್ತನ್ನು ವಿಧಿಸಿದೆ.
ಪ್ರತಿಯೊಂದು ಮಳಿಗೆಯಲ್ಲಿ ಅನುಮತಿ ಪಡೆದ ಪತ್ರವನ್ನು ಕಡ್ಡಾಯವಾಗಿ ಪ್ರದರ್ಶನ ಮಾಡುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಲಾಗಿದೆ‌.
ಹಸಿರು ಪಟಾಕಿ ಮಾಡುವ ಮಳಿಗೆಗಳ ಸುತ್ತಮುತ್ತ ಪ್ರತಿದಿನ ಸ್ಯಾನಿಟೈಸ್ ಮಾಡಬೇಕು. ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಅಳವಡಿಸಿರಬೇಕು ಎಎಂದು ಸೂಚಿಸಲಾಗಿದ್ದು, ಹಸಿರು ಪಟಾಕಿ ಮಾರಾಟ ಮಾಡುವ ಸಮಯದಲ್ಲಿ ಮಾರ್ಗಸೂಚಿ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾರ್ಗಸೂಚಿಯಲ್ಲಿ ಎಚ್ಚರಿಕೆ ನೀಡಲಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement