ಕಾಶ್ಮೀರದ ಎಲ್​ಒಸಿ ಬಳಿ ಸ್ಫೋಟದಲ್ಲಿ ಇಬ್ಬರು ಸೈನಿಕರ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ನೌಶೇರಾ-ಸುಂದರ್‌ಬಾನಿ ವಲಯದ ಗಡಿ ನಿಯಂತ್ರಣ ರೇಖೆ ಬಳಿ ನಡೆದ ಗಣಿ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.
ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಡೆದ ಗಣಿ ಸ್ಫೋಟದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಓರ್ವ ಅಧಿಕಾರಿ ಮತ್ತು ಸೈನಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗಾಯಗೊಂಡವರನ್ನು ಸೇನಾ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೂವರು ಗಾಯಗೊಂಡಿದ್ದಾರೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೌಶೇರಾ ಸೆಕ್ಟರ್ ಜಮ್ಮುವಿನ ಪಿರ್ಪಾಂಜಲ್ ಪ್ರದೇಶದ ಭಾಗವಾಗಿರುವ ರಜೌರಿ ಜಿಲ್ಲೆಯ ಅಡಿಯಲ್ಲಿ ಬರುತ್ತದೆ, ಅಲ್ಲಿ ಕಳೆದ ಮೂರು ವಾರಗಳಿಂದ ಸೇನಾ ಕಾರ್ಯಾಚರಣೆ ನಡೆಯುತ್ತಿದೆ.
ಪೂಂಚ್‌ನ ಅರಣ್ಯದಲ್ಲಿ ಅಡಗಿರುವ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಸೇರಿದಂತೆ ಇಬ್ಬರು ಅಧಿಕಾರಿಗಳು ಸೇರಿದಂತೆ 9 ಯೋಧರು ಹುತಾತ್ಮರಾಗಿದ್ದಾರೆ.

ಪ್ರಮುಖ ಸುದ್ದಿ :-   ಅಮೆರಿಕ ಮಾದರಿಯಲ್ಲಿ ಭಾರತದಲ್ಲೂ 50% ಉತ್ತರಾಧಿಕಾರ ತೆರಿಗೆ : ಸ್ಯಾಮ್ ಪಿತ್ರೊಡಾ ಹೇಳಿಕೆಯಿಂದ ವಿವಾದ ; ಬಿಜೆಪಿ ವಾಗ್ದಾಳಿ, ಇದು ನಮ್ಮ ಕಲ್ಪನೆಯಲ್ಲ ಎಂದ ಕಾಂಗ್ರೆಸ್

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement